ಮಂಗಳೂರು: ಆರ್ ಎಸ್ ಎಸ್ ಹಿರಿಯ ಮುಖಂಡ ಸತೀಶ್ ಪ್ರಭು ಕಾಂಗ್ರೆಸ್’ಗೆ ಸೇರ್ಪಡೆಯಾಗಿದ್ದಾರೆ.
ಬಿಜೆಪಿ, ಆರ್ ಎಸ್ ಎಸ್ ನಲ್ಲಿ 32 ವರ್ಷಗಳಿಂದ ವಿವಿಧ ಜವಾಬ್ದಾರಿ ವಹಿಸಿಕೊಂಡಿದ್ದ ಸತೀಶ್ ಪ್ರಭು 2014ರಲ್ಲಿ ಮೋದಿ ಅವರನ್ನು ಮಂಗಳೂರಿಗೆ ಕರೆಸಿ ಪಕ್ಷ ಸಂಘಟಿಸಿದ್ದರು.
ಬಿಜೆಪಿಯಿಂದ ಜನಹಿತ ಸಾಧ್ಯವಿಲ್ಲ ಎಂದು ಸತೀಶ್ ಪ್ರಭು ಹೇಳಿದ್ದಾರೆ.
ಮಂಗಳೂರಿನಲ್ಲಿ ನಿರ್ಣಾಯಕ ಆಗಿರುವ ಜಿಎಸ್ ಬಿ ಸಮುದಾಯಕ್ಕೆ ಸೇರಿದ ಸತೀಶ್ ಪ್ರಭು ಅವರು ನಾಲ್ವರು ಮಾಜಿ ಕಾರ್ಪೊರೇಟರ್ಗಳ ಜೊತೆ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷ ಸೇರ್ಪಡೆ ಆಗಿದ್ದಾರೆ.
ವಿಧಾನಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಅವರು ಪಕ್ಷದ ಧ್ವಜ ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು. ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಿಸಿದರು.