ಮಂಗಳೂರು: ಪ್ರತಿಷ್ಠಿತ ಕಾಲೇಜಿನಲ್ಲಿ‌ ಮುತ್ತು ಕೊಡುವ ಸ್ಪರ್ಧೆ: ವಿದ್ಯಾರ್ಥಿ ವಶಕ್ಕೆ!

Prasthutha|

ಮಂಗಳೂರು: ನಗರದ ಪ್ರತಿಷ್ಠಿತ ಖಾಸಗಿ ಕಾಲೇಜೊಂದರ ವಿದ್ಯಾರ್ಥಿಗಳ ಚುಂಬನ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವೈರಲ್ ಮಾಡಿರುವ ವಿದ್ಯಾರ್ಥಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

- Advertisement -

ಇಲ್ಲಿ ಎಲ್ಲರ ಮುಂಭಾಗವೇ ಲಿಪ್ ಲಾಕ್ ಮಾಡಬೇಕೆಂಬ ಪಂದ್ಯಾಟವನ್ನು ವಿದ್ಯಾರ್ಥಿಗಳು ಮಾಡಿದ್ದಾರೆ. ವಿದ್ಯಾರ್ಥಿಗಳ ಹುಚ್ಚಾಟದ ಈ ದೃಶ್ಯವನ್ನು ಜೊತೆಗಿದ್ದ ವಿದ್ಯಾರ್ಥಿ ವೀಡಿಯೋ ಮಾಡಿದ್ದು, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದಾನೆ.

ವೀಡಿಯೋದಲ್ಲಿ ಮಂಗಳೂರು ನಗರದ ಪ್ರತಿಷ್ಠಿತ ವಿದ್ಯಾಸಂಸ್ಥೆಯ ಪಿಯುಸಿ ವಿದ್ಯಾರ್ಥಿಗಳು ಖಾಸಗಿ ಕೊಠಡಿಯಲ್ಲಿ ಚುಂಬನದಲ್ಲಿ ತೊಡಗಿದ್ದರು ಎನ್ನಲಾಗಿದೆ.

- Advertisement -

ವಿದ್ಯಾರ್ಥಿನಿಯರು ಕಾಲೇಜು ಯೂನಿಫಾರಂನಲ್ಲಿದ್ದು , ವಿದ್ಯಾರ್ಥಿಗಳು ಯೂನಿಫಾರಂ ಧರಿಸಿಲ್ಲ. ಇದು ವಿದ್ಯಾರ್ಥಿಗಳು ವಾಸಿಸುವ ಕೊಠಡಿಯಿರಬಹುದೆಂದು ಶಂಕೆ ವ್ಯಕ್ತವಾಗಿದೆ.

ಅಲ್ಲಿಗೆ ಈ ವಿದ್ಯಾರ್ಥಿಯರು ತೆರಳಿರಬಹುದು. ಆಗ ಇವರು ಲಿಪ್ ಲಾಕ್ ಮಾಡಿರಬಹುದು ಎನ್ನಲಾಗಿದೆ.

ಪ್ರಕರಣ ಸಂಬಂಧ ಕಾನೂನು ತಜ್ಞರ ಸಲಹೆ ಪಡೆದು ಕ್ರಮಕ್ಕೆ ಮುಂದಾಗಿದ್ದಾರೆ. ಈ ವೀಡಿಯೋದಲ್ಲಿ ಮೂವರು ಯುವಕರು ಹಾಗೂ ಮೂವರು ವಿದ್ಯಾರ್ಥಿನಿಯರಿದ್ದಾರೆ.

Join Whatsapp