ಉಪ್ಪಿನಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಬೀಗ ಮುರಿದು ಒಳ ನುಗ್ಗಿದ ದುಷ್ಕರ್ಮಿಗಳು ಕಳ್ಳತನ ನಡೆಸಿದ ಘಟನೆ ಬೆಳಕಿಗೆ ಬಂದಿದೆ.
ಪ್ರಸ್ತುತ ಕಾಲೇಜಿನಲ್ಲಿ ವಾರ್ಷಿಕ ಪರೀಕ್ಷೆ ನಡೆಯುತ್ತಿದ್ದು, ಕಾಲೇಜಿನ ಕೆಮಿಸ್ಟ್ರಿ ಲ್ಯಾಬ್ ಕೊಠಡಿಯ ಬೀಗ ಮುರಿದು ಒಳ ನುಗ್ಗಿದ ದುಷ್ಕರ್ಮಿಗಳು ಕೊಠಡಿಯಲ್ಲಿದ್ದ ಕಪಾಟಿನ ಬಾಗಿಲು ಮುರಿಯಲು ಯತ್ನಿಸಿದ್ದು, ಬೀಗದ ಕೀ ಸಿಗದ ಕಾರಣ ಡ್ರಾಯರ್ ಗಳ ಬೀಗ ಮುರಿದಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಶೇಖರ್ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಪರೀಕ್ಷಾ ಪ್ರಶ್ನೆಪತ್ರಿಕೆಗಾಗಿ ಈ ಕಳವು ಯತ್ನ ನಡೆದಿರಬಹುದೇ ಎಂಬ ಶಂಕೆ ವ್ಯಕ್ತವಾಗಿದ್ದು, ಅದೃಷ್ಟಾವಶಾತ್ ಪ್ರಶ್ನೆ ಪತ್ರಿಕೆಗಳನ್ನು ರಕ್ಷಿಸಿ ಇಡಲಾದ ಕಪಾಟಿನ ಬೀಗದ ಕೈ ಪ್ರಾಂಶುಪಾಲರ ಬಳಿಯಲ್ಲಿದ್ದ ಕಾರಣ ಹಾಗೂ ಒಂದಷ್ಟು ಭದ್ರತಾ ವ್ಯವಸ್ಥೆಯ ಹಿನ್ನೆಲೆಯಲ್ಲಿ ಪ್ರಶ್ನಾಪತ್ರಿಕೆಯ ಕಳವು ಸಾಧ್ಯವಾಗಿಲ್ಲ ದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಪೊಲೀಸ್ ಇಲಾಖೆ, ಬೆರಳಚ್ಚು ತಜ್ಞರು, ಶ್ವಾನ ದಳ ಭೇಟಿ ನೀಡಿದ್ದು, ತನಿಖೆ ಮುಂದುವರಿಯುತ್ತಿದೆ.