ಮಂಗಳೂರು: ಆಟೋ ರಿಕ್ಷಾ- ಟೆಂಪೋ ಟ್ರಾವೆಲರ್ ಡಿಕ್ಕಿ;ಮೂವರಿಗೆ ಗಾಯ

Prasthutha|

ಮಂಗಳೂರು: ಆಟೋ ರಿಕ್ಷಾ ಹಾಗೂ ಟೆಂಪೋ ಟ್ರಾವೆಲರ್ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಪಲ್ಟಿಯಾಗಿ ಮೂವರು ಗಾಯಗೊಂಡ ಘಟನೆ ಮಾಣಿ ಸಮೀಪದ ಬುಡೋಳಿಯಲ್ಲಿ ಶನಿವಾರ ನಡೆದಿದೆ.

- Advertisement -


ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಉಪ್ಪಿನಂಗಡಿ ಕಡೆಯಿಂದ ಮಾಣಿ ಕಡೆಗೆ ತೆರಳುತ್ತಿದ್ದ ಅಟೋ ರಿಕ್ಷಾ ಹಾಗೂ ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಟೆಂಪೋ ಟ್ರಾವೆಲರ್ ನಡುವೆ ಬುಡೋಳಿ ವಿಸ್ಲಂ ಶಾಲೆಯ ಸಮೀಪ ಅಪಘಾತ ಸಂಭವಿಸಿದೆ.


ರಿಕ್ಷಾದಲ್ಲಿದ್ದ ಮಂಜೇಶ್ವರ ಮೂಲದ ಮೂವರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಕೂಡಲೇ ಮಾಣಿಯ ಸೋಷಿಯಲ್ ಇಕ್ವ ಆಂಬ್ಯುಲೆನ್ಸ್ ನಲ್ಲಿ ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Join Whatsapp