Home ಕರಾವಳಿ ಮಂಗಳೂರು: ಮೂವರು ಪ್ರವಾಸಿಗರು ಸಮುದ್ರಪಾಲು, ಓರ್ವ ರಕ್ಷಣೆ

ಮಂಗಳೂರು: ಮೂವರು ಪ್ರವಾಸಿಗರು ಸಮುದ್ರಪಾಲು, ಓರ್ವ ರಕ್ಷಣೆ

0

ಮಂಗಳೂರು: ಬೀಚ್ ಗೆ ಪ್ರವಾಸಕ್ಕೆ ಬಂದಿದ್ದ ಮೂವರು ವ್ಯಕ್ತಿಗಳು ಸಮುದ್ರಪಾಲಾಗಿರುವಂತಹ ಘಟನೆ ಮಂಗಳೂರಿನ ಕುಳಾಯಿ ಬಳಿಯ ಹೊಸಬೆಟ್ಟು ಬೀಚ್ ಬಳಿ ನಡೆದಿದೆ.


ಚಿತ್ರದುರ್ಗದ ಮಂಜುನಾಥ್, ಶಿವಮೊಗ್ಗದ ಶಿವಕುಮಾರ್ ಮತ್ತು ಬೆಂಗಳೂರಿನ ಸತ್ಯವೇಲು ಮೃತರು. ಬೀದರ್ ನ ಪರಮೇಶ್ವರ್ ನನ್ನು ಸ್ಥಳೀಯ ಮೀನುಗಾರರು ರಕ್ಷಿಸಿದ್ದಾರೆ.


ಈ ನಾಲ್ವರು ಸ್ನೇಹಿತರು ಬೆಂಗಳೂರಿನ ಎಎಂಸಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಾಗಿದ್ದು, ಮಂಗಳವಾರ ರಾತ್ರಿ ಕಾರಿನಲ್ಲಿ ಬೆಂಗಳೂರಿನಿಂದ ಹೊರಟು ಇಂದು ಬೆಳಗ್ಗೆ ಮಂಗಳೂರಿಗೆ ತಲುಪಿದ್ದರು. ಬಳಿಕ ಮಧ್ಯಾಹ್ನದ ವೇಳೆಗೆ ಕುಳಾಯಿ ಜೆಟ್ಟಿ ಬಳಿಗೆ ಬಂದಿದ್ದಾರೆ. ಅಲ್ಲಿ ಎಲ್ಲರೂ ಸಮುದ್ರಕ್ಕೆ ಇಳಿದು ಆಡುತ್ತಿದ್ದ ಸಂದರ್ಭ ನಾಲ್ವರು ನೀರು ಪಾಲಾಗಿದ್ದಾರೆ ಎಂದು ಹೇಳಲಾಗಿದೆ.

ಈ ಘಟನೆಯನ್ನು ಗಮನಿಸುತ್ತಿದ್ದ ಸ್ಥಳೀಯ ಮೀನುಗಾರರು ನಾಲ್ವರ ರಕ್ಷಣೆಗೆ ಮುಂದಾದರಾದರೂ ಅಷ್ಟರಲ್ಲಾಗಲೇ ಮೂವರು ನೀರು ಪಾಲಾಗಿದ್ದರು. ಓರ್ವನನ್ನು ರಕ್ಷಿಸಿ ತಕ್ಷಣ ಆತನನ್ನು ನಗರದ ಏ.ಜೆ. ಆಸ್ಪತ್ರೆಗೆ ರವಾನಿಸಿದ್ದಾರೆ ಎಂದು ತಿಳಿದು ಬಂದಿದೆ.

ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

NO COMMENTS

LEAVE A REPLY

Please enter your comment!
Please enter your name here

Exit mobile version