Home ಕರಾವಳಿ ಮಂಗಳೂರು: ಇಂದು ಕಾಂಗ್ರೆಸ್ ಬೃಹತ್ ಸಮಾವೇಶ, ಡ್ರೋನ್ ಹಾರಾಟ ನಿಷೇಧ

ಮಂಗಳೂರು: ಇಂದು ಕಾಂಗ್ರೆಸ್ ಬೃಹತ್ ಸಮಾವೇಶ, ಡ್ರೋನ್ ಹಾರಾಟ ನಿಷೇಧ

ಮಂಗಳೂರು: ಇಂದು ನಗರದ ಅಡ್ಯಾರ್ ಸಹ್ಯಾದ್ರಿ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್​ ರಾಜ್ಯ ಮಟ್ಟದ ಬೃಹತ್ ಕಾರ್ಯಕರ್ತರ ಸಮಾವೇಶ ನಡೆಯಲಿದೆ.

ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ರಾಜ್ಯ ಉಸ್ತು ವಾರಿ ರಣದೀಪ್ ಸಿಂಗ್ ಸುರ್ಜೆವಾಲ, ಎಲ್ಲಾ ಸಚಿವರು, ಸಂಸದರರು, ಶಾಸಕರು, ಪದಾಧಿಕಾರಿಗಳು, ವಿಧಾನಸಭೆ ಅಭ್ಯರ್ಥಿಗಳು, ಆಕಾಂಕ್ಷಿಗಳು, ಎಐಸಿಸಿ, ಕೆಪಿಸಿಸಿ ಸದಸ್ಯರು, ಡಿಸಿಸಿ ಅಧ್ಯಕ್ಷರು ಸೇರಿದಂತೆ ಮುಂಚೂಣಿ ಘಟಕದ ಎಲ್ಲಾ ಹಂತದ ಅಧ್ಯಕ್ಷರು ಭಾಗವಹಿಸಲಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಸಮಾವೇಶದಲ್ಲಿ ಅಲ್ಲದೆ, ವಾಮಂಜೂರಿನ ತಿರುವೈಲ್‍ನಲ್ಲಿ ಕಂಬಳ ಕಾರ್ಯಕ್ರಮದಲ್ಲಿಯೂ ಭಾಗವಹಿಸಲಿದ್ದಾರೆ.

ಬೆಳಿಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಅಡ್ಯಾರ್ ಸಹ್ಯಾದ್ರಿ ಕಾಲೇಜಿನ ಆವರಣದ ಆವರಣದ ಸುತ್ತಮುತ್ತ ಐದು ಕಿಲೋಮೀಟರ್ ವ್ಯಾಪ್ತಿಯಲ್ಲಿ ಡ್ರೋನ್ ಹಾರಾಟಕ್ಕೆ ನಿಷೇಧಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಆದೇಶಿಸಿದ್ದಾರೆ.

ಮುಖ್ಯಮಂತ್ರಿಗಳ ಸುರಕ್ಷತೆ ಮತ್ತು ಭದ್ರತೆಯ ಹಿತದೃಷ್ಟಿಯಿಂದ ಈ ಕ್ರಮಕೈಗೊಳ್ಳಲಾಗಿದೆ. ಈ ಕಾರ್ಯಕ್ರಮದ ಬಳಿಕ ವಾಮಂಜೂರಿನ ತಿರುವೈಲ್‍ನಲ್ಲಿ ಕಂಬಳದಲ್ಲಿಯೂ ಸುಎಂ ಸಿದ್ದರಾಮಯ್ಯ ಭಾಗವಹಿಸಲಿದ್ದು, ವಾಮಂಜೂರಿನ ತಿರುವೈಲಿನಲ್ಲಿ ಕಂಬಳ ಕಾರ್ಯಕ್ರಮದ ಸುತ್ತಮುತ್ತಲೂ 5 ಕಿ.ಮೀ ವ್ಯಾಪ್ತಿಯನ್ನು ಕೂಡ ತಾತ್ಕಾಲಿಕವಾಗಿ ರೆಡ್‍ಜೋನ್ ಎಂದು ಪರಿಗಣಿಸಿ ಡ್ರೋನ್ ಹಾರಾಟ ನಿರ್ಬಂಧಿಸಲಾಗಿದೆ.

Join Whatsapp
Exit mobile version