Home ಟಾಪ್ ಸುದ್ದಿಗಳು ಮಂಗಳೂರು: ಸೋಮೇಶ್ವರದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಮುದ್ರಪಾಲು

ಮಂಗಳೂರು: ಸೋಮೇಶ್ವರದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಮುದ್ರಪಾಲು

ಮಂಗಳೂರು: ವಿಹಾರಕ್ಕೆಂದು ಕಡಲತೀರಕ್ಕೆ ತೆರಳಿದ್ದ ಇಬ್ಬರು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಸಮುದ್ರಪಾಲಾಗಿರುವ ಘಟನೆ ಉಳ್ಳಾಲದ ಸೋಮೇಶ್ವರದಲ್ಲಿ ನಡೆದಿದೆ.

ಮಂಜೇಶ್ವರದ ಕುಂಜತ್ತೂರು ಅಡ್ಕ ನಿವಾಸಿ ಯೆಶ್ವಿತ್ (18), ಕುಂಜತ್ತೂರು ಮಜಲ್ ನಿವಾಸಿ ಯುವರಾಜ್ (18) ಸಮುದ್ರಪಾಲಾದವರು.

ಇಬ್ಬರು ಸಮೀಪದ ಸೋಮೇಶ್ವರ ಪರಿಜ್ಞಾನ ಪಿಯುಸಿ ಕಾಲೇಜಿನ ದ್ವಿತೀಯ ವರ್ಷ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾಗಿದ್ದಾರೆ. ಕಾಲೇಜು ಮುಗಿಸಿ ಮಧ್ಯಾಹ್ನ ಬಳಿಕ ಸಮುದ್ರ ವಿಹಾರಕ್ಕೆಂದು ತೆರಳಿದ್ದರು. ಈ ವೇಳೆ ಓರ್ವ ವಿದ್ಯಾರ್ಥಿ ಸಮುದ್ರದ ಅಲೆಗಳ ನಡುವೆ ಸಿಲುಕಿದರೆ, ಇನ್ನೋರ್ವ ವಿದ್ಯಾರ್ಥಿ ಆತನನ್ನು ಹಿಡಿಯಲು ಮುಂದಾಗುತ್ತಿದ್ದಂತೆ ಇಬ್ಬರು ಅಲೆಗಳ ನಡುವೆ ಸಿಲುಕಿ ನಾಪತ್ತೆಯಾಗಿದ್ದಾರೆ. ಸ್ಥಳಕ್ಕೆ ಉಳ್ಳಾಲ ಠಾಣಾಧಿಕಾರಿ ಹೆಚ್.ಎನ್ ಬಾಲಕೃಷ್ಣ ಭೇಟಿ ನೀಡಿದ್ದಾರೆ.

Join Whatsapp
Exit mobile version