ಮಂಗಳೂರು: ಮಿತಿ ಮೀರಿದ ಮತೀಯ ಶಕ್ತಿಗಳ ಅನೈತಿಕ ಪೋಲಿಸ್ ಗಿರಿ; ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ನಗರ ಪೊಲೀಸ್ ಉಪ ಆಯುಕ್ತರನ್ನು ಭೇಟಿಯಾದ SDPI ಜಿಲ್ಲಾ ನಿಯೋಗ

Prasthutha|

ಮಂಗಳೂರು: ಪ್ರಸಕ್ತ ದಿನಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತೀಯ ಶಕ್ತಿಗಳು ನಡೆಸುತ್ತಿರುವ ಗೂಂಡಾಗಿರಿ ಹಾಗೂ ಅನೈತಿಕ ಪೋಲಿಸ್ ಗಿರಿ ಯಿಂದ ಜಿಲ್ಲೆಯ ಶಾಂತಿ ಸುವ್ಯವಸ್ಥೆಗೆ ಅಪಾಯ ತಂದೊಡ್ಡುವ ಸಾದ್ಯತೆಗಳಿವೆ. ಈ ಬಗ್ಗೆ ಪೊಲೀಸ್ ಇಲಾಖೆ ಯಾವುದೇ ಒತ್ತಡಗಳಿಗೆ ಒಳಗಾಗದೆ ಆರೋಪಿಗಳು ಎಷ್ಟೇ ಪ್ರಬಲರಾದರೂ ಕಠಿಣ  ಕಾನೂನು ಕ್ರಮ ಕೈಗೊಳ್ಳುವ ಮೂಲಕ ಜಿಲ್ಲೆಯ ಜನತೆಗೆ ನೆಮ್ಮದಿಯ ಬದುಕು ನಡೆಸಲು ಅವಕಾಶ ಕಲ್ಪಿಸಬೇಕು ಎಂದು ಆಗ್ರಹಿಸಿ SDPI ದಕ್ಷಿಣ ಕನ್ನಡ ಜಿಲ್ಲಾ ನಿಯೋಗವು ಮಂಗಳವಾರ ನಗರ ಪೊಲೀಸ್ ಆಯುಕ್ತರನ್ನು ಮತ್ತು ದಕ್ಷಿಣ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನು ಭೇಟಿ ಮಾಡಿದೆ.

- Advertisement -

ಸಕಾರಾತ್ಮಕವಾಗಿ ಸ್ಪಂದಿಸಿದ ಆಯುಕ್ತರು ಮತ್ತು ವರಿಷ್ಠಾಧಿಕಾರಿಗಳು ಈ ವಿಚಾರದಲ್ಲಿ ಯಾವುದೇ ಒತ್ತಡಗಳಿಗೆ ಮಣಿಯದೆ ಕಾನೂನಾತ್ಮಕ ಕ್ರಮಗಳನ್ನು ಕೈಗೊಳ್ಳುವ ಭರವಸೆಯನ್ನು ನಿಯೋಗಕ್ಕೆ ನೀಡಿದರು ಎಂದು SDPI ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ನಿಯೋಗದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಅನ್ವರ್ ಸಾದತ್ ಬಜತ್ತೂರು, ಜಮಾಲ್ ಜೋಕಟ್ಟೆ ,  ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ SDTU ರಾಜ್ಯ ಕಾರ್ಯದರ್ಶಿ ಷರೀಫ್ ಪಾಂಡೇಶ್ವರ ಉಪಸ್ಥಿತರಿದ್ದರು.

Join Whatsapp