ಮಂಗಳೂರು: ಹಿರಿಯ ಸಾಹಿತಿ, ಕಾದಂಬರಿಕಾರ ಕೆ.ಟಿ.ಗಟ್ಟಿ (ಕೂಡ್ಲು ತಿಮ್ಮಪ್ಪ ಗಟ್ಟಿ) ಅವರು ಸೋಮವಾರ ನಿಧನರಾಗಿದ್ದಾರೆ.
ಮೂಲತಃ ಕಾಸರಗೋಡು ಸಮೀಪದ ಕೂಡ್ಲೂವಿನಲ್ಲಿ ಜನಿಸಿದ ಕೆ.ಟಿ.ಗಟ್ಟಿ ಅವರು ಮಂಗಳೂರಿನಲ್ಲಿ ನೆಲೆಸಿದ್ದರು.
ಇವರ ಮೊದಲ ಕಾದಂಬರಿ ‘ಶಬ್ದಗಳು’ 1973ರಲ್ಲಿ ಪ್ರಕಟವಾಯಿತು. ಈವರೆಗೆ 48 ಕಾದಂಬರಿಗಳು 5 ಕಥಾಸಂಕಲನಗಳು, 6 ಪ್ರಬಂಧ ಸಂಕಲನಗಳು, 22 ನಾಟಕಗಳು, 14 ಬಾನುಲಿ ನಾಟಕಗಳು, 2 ಕವನ ಸಂಕಲನಗಳಲ್ಲದೆ ಆತ್ಮಕಥೆ, ವ್ಯಕ್ತಿಚಿತ್ರ, ಮಕ್ಕಳ ನಾಟಕ ಹಾಗೂ ಪ್ರವಾಸ ಕಥನಗಳನ್ನೂ ಬರೆದು ಸಾಹಿತ್ಯ ಕ್ಷೇತ್ರವನ್ನು ಶ್ರೀಮಂತಗೊಳಿಸಿದ ಹೆಗ್ಗಳಿಕೆ ಇವರದು.
ಕೆ.ಟಿ.ಗಟ್ಟಿ ಅವರು ಕರ್ನಾಟಕ ಸಾಹಿತ್ಯ ಅಕಾಡಮಿ ಗೌರವ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪಡೆದಿದ್ದಾರೆ.