ಮಂಗಳೂರು: ಉದ್ಯೋಗಕ್ಕೆ ತೆರಳಿದ್ದ ಯುವತಿ ನಾಪತ್ತೆ

Prasthutha|

ಮಂಗಳೂರು: ಉದ್ಯೋಗಕ್ಕೆ ತೆರಳಿದ್ದ ಯುವತಿಯೋರ್ವಳು ಮನೆಗೆ ವಾಪಸ್ ಬರದೆ ನಾಪತ್ತೆಯಾದ ಘಟನೆ ಮಂಗಳೂರಿನ ಸುರತ್ಕಲ್ ನಲ್ಲಿ ನಡೆದಿದೆ.

- Advertisement -


ಸುರತ್ಕಲ್’ನ 3ನೇ ಬ್ಲಾಕ್ ನಿವಾಸಿ 20 ವರ್ಷದ ಶಿವಾನಿ ನಾಪತ್ತೆಯಾದ ಯುವತಿ.


ಈಕೆ ಮಂಗಳೂರಿನ ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸಕ್ಕೆ ಹೋಗುತ್ತಿದ್ದು, ಸೋಮವಾರ ಮನೆಯಿಂದ ಕೆಲಸಕ್ಕೆ ಹೋಗುವುದಾಗಿ ಹೇಳಿ ತೆರಳಿದ್ದ ಯುವತಿ ನಾಪತ್ತೆಯಾಗಿದ್ದಾಳೆ.
ಸದ್ಯ ಯುವತಿಯ ಮೊಬೈಲ್ ಸ್ವಿಚ್ಛ್ ಆಫ್ ಆಗಿದ್ದು, ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ.



Join Whatsapp