ಮಂಗಳೂರು: ನಾಳೆ ವಿಶ್ವ ಪ್ರವಾಸೋದ್ಯಮ ದಿನಾಚರಣೆ 

Prasthutha|

ಮಂಗಳೂರು: ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆಯ ಸಹಯೋಗದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಮತ್ತು ಜಿಲ್ಲಾ ಪ್ರವಾಸೋದ್ಯಮ ಕುರಿತ ಕಾರ್ಯಗಾರವನ್ನು ಸೆ.27 ರಂದು ಬೆಳಗ್ಗೆ 9.30 ಕ್ಕೆ ನಗರದ ಓಷಿಯನ್ ಪರ್ಲ್ ಹೋಟೆಲ್ ನಲ್ಲಿ ಹಮ್ಮಿಕೊಳ್ಳಲಾಗಿದೆ.

- Advertisement -

ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್ ಅವರು ಘನ ಉಪಸ್ಥಿತಿ ವಹಿಸುವರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಕಾರ್ಯಕ್ರಮ ಉದ್ಘಾಟಿಸುವರು. ಕಾನೂನು ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ಸಭೆ ಮತ್ತು ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಡಾ.ಎಚ್.ಕೆ. ಪಾಟೀಲ ಗೌರವ ಉಪಸ್ಥಿತಿ ವಹಿಸುವರು. ಶಾಸಕರಾದ ಡಿ. ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸುವರು.

ಮುಖ್ಯ ಅತಿಥಿಗಳಾಗಿ ಸಂಸದರಾದ ನಳಿನ್ ಕುಮಾರ್ ಕಟೀಲ್, ರಾಜ್ಯಸಭಾ ಸಂಸದರಾದ ವೀರೇಂದ್ರ ಹೆಗ್ಗಡೆ, ಶಾಸಕರಾದ ಡಾ. ಭರತ್ ಶೆಟ್ಟಿ ವೈ, ಹರೀಶ್ ಪೂಂಜ, ರಾಜೇಶ್ ನಾಯ್ಕ್, ಉಮಾನಾಥ.ಎ.ಕೋಟ್ಯಾನ್, ಅಶೋಕ್ ಕುಮಾರ್.ರೈ, ಭಾಗೀರಥಿ ಮುರುಳ್ಯ, ವಿಧಾನ ಪರಿಷತ್ ಶಾಸಕರಾದ ಕೋಟ ಶ್ರೀನಿವಾಸ ಪೂಜಾರಿ, ಬಿ.ಎಂ. ಫಾರೂಕ್, ಕೆ. ಹರೀಶ್ ಕುಮಾರ್, ಎಸ್.ಎಲ್. ಭೋಜೇಗೌಡ, ಪ್ರತಾಪ ಸಿಂಹ ನಾಯಕ್, ಕೆ. ಮಂಜುನಾಥ ಭಂಡಾರಿ, ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಸುಧೀರ್ ಶೆಟ್ಟಿ ಭಾಗವಹಿಸುವರು.