ನೆಲ್ಯಾಡಿ: ಟಿಪ್ಪರ್ ಹಾಗೂ ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಮಂಗಳೂರಿನ ಪಂಪ್ವೆಲ್ ನಲ್ಲಿ ನಡೆದಿದೆ.
ಇಚ್ಚಂಪಾಡಿ ಇಲ್ಲುಂಗಲ್ ನಿವಾಸಿ ಆಂಟನಿ ಹಾಗೂ ವಾಮನ ದಂಪತಿ ಪುತ್ರ ಸಂದೇಶ್ (25) ಮೃತಪಟ್ಟ ಯುವಕ.
ಇವರು ಬೆಂದೂರ್ವೆಲ್ ನಲ್ಲಿ ಸಾಫ್ಟ್ ವೇರ್ ಕಂಪನಿಯಲ್ಲಿ ಉದ್ಯೋಗಿಯಾಗಿದ್ದು, ರಾತ್ರಿ ಪಾಳಿಯ ಕೆಲಸ ಮುಗಿಸಿ ತನ್ನ ಸ್ಕೂಟಿಯಲ್ಲಿ ರೂಮ್ ಗೆ ತೆರಳುವ ವೇಳೆ ಪಂಪ್ ವೆಲ್ ನಲ್ಲಿ ಈ ಅಪಘಾತ ಸಂಭವಿಸಿದೆ.
ಗಂಭೀರ ಗಾಯಗೊಂಡಿದ್ದ ಸಂದೇಶ್ ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.