ಮಂಗಳೂರು: ಪಶ್ಚಿಮ ಬಂಗಾಳದ ಯುವಕನ ಹತ್ಯೆ

Prasthutha|

ಮಂಗಳೂರು: ತನ್ನ ಪತ್ನಿಯ ಜತೆ ಅಕ್ರಮ ಸಂಬಂಧವಿದೆ ಎಂದು ಆರೋಪಿಸಿ ವ್ಯಕ್ತಿಯೊಬ್ಬ ಯುವಕನನ್ನು ಕೊಲೆ ಮಾಡಿದ ಘಟನೆ ಕೂಳೂರಿನಲ್ಲಿ ನಡೆದಿದೆ.

- Advertisement -


ಮೂಲತಃ ಪಶ್ಚಿಮ ಬಂಗಾಳದ ಪ್ರಸ್ತುತ ಕುಳೂರಿನಲ್ಲಿ ವಾಸವಾಗಿರುವ ಬಿಕಾಸ್ ಗುನಿಯಾ (22) ಕೊಲೆಯಾದ ಯುವಕ. ಪಶ್ಚಿಮ ಬಂಗಾಳದ ವಾಸುದೇವ ಗುನಿಯಾ (34) ಕೊಲೆಗೈದ ಆರೋಪಿ ಎಂದು ಪೊಲೀಸರು ತಿಳಿಸಿದ್ದು, ಆರೋಪಿಯನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ.


ಕೊಲೆಯಾದ ಬಿಕಾಸ್ ಗುನಿಯಾ ಮತ್ತು ಆರೋಪಿ ವಾಸುದೇವ ಗುನಿಯಾ ಪಶ್ಚಿಮ ಬಂಗಳಾದವರಾಗಿದ್ದು, ಕುಳೂರಿನಲ್ಲಿ ಗಾರೆ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದರು. ವಾಸುದೇವ ಗುನಿಯಾನಿಗೆ ಬಿಕಾಸ್ ಗುನಿಯಾ ಊರಿನ ಯುವತಿಯ ಜತೆ ಹಲವು ವರ್ಷದ ಹಿಂದೆ ಮದುವೆಯಾಗಿತ್ತು. ಆತನ ಪತ್ನಿ ಪಶ್ಚಿಮ ಬಂಗಳಾದಲ್ಲೇ ವಾಸ್ತವ್ಯವಿದ್ದಳು. ಆಕೆಯ ಜತೆ ಬಿಕಾಸ್ ಗುನಿಯಾನಿಗೆ ಅಕ್ರಮ ಸಂಬಂಧವಿದೆ, ಮೊಬೈಲ್ ಮೂಲಕ ಮಾತನಾಡುತ್ತಾನೆ ಎಂಬ ಸಂಶಯ ವ್ಯಕ್ತಪಡಿಸಿದ ಆರೋಪಿಯು ಈ ವಿಚಾರದಲ್ಲಿ ಹಲವು ಬಾರಿ ಗಲಾಟೆ ಮಾಡಿದ್ದ ಎನ್ನಲಾಗಿದೆ. ಮತ್ತೆ ರವಿವಾರ ಮಧ್ಯಾಹ್ನ ಮಾತಿಗೆ ಮಾತು ಬೆಳೆದು ಆರೋಪಿ ವಾಸುದೇವ ರಾಡ್ ನಿಂದ ಬಿಕಾಸ್ ನ ಎದೆಗೆ ಗುದ್ದಿದ್ದಾನೆ ಎನ್ನಲಾಗಿದೆ. ಇದರಿಂದ ಬಿಕಾಸ್ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



Join Whatsapp