ಮಂಗಳೂರು: ನೈತಿಕ ಪೊಲೀಸ್ ಗಿರಿ ವಿರುದ್ಧ ಯುವ ಜೆಡಿಎಸ್ ಪ್ರತಿಭಟನೆ

Prasthutha|

ಮಂಗಳೂರು: ದ.ಕ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ನೈತಿಕ ಪೊಲೀಸ್ ಗಿರಿ ವಿರುದ್ಧ ನಗರದ ಮಿನಿ ವಿಧಾನ ಸೌಧದ ಮುಂಭಾಗ ಯುವ ಜನತಾದಳದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

- Advertisement -

ಪ್ರತಿಭಟನೆಯನ್ನು ಉದ್ದೇಶಿಸಿ ಮಾತಾಡಿದ ದ.ಕ. ಜಿಲ್ಲೆ ಯುವ ಜನತಾದಳದ ಅಧ್ಯಕ್ಷ ಅಕ್ಷಿತ್ ಸುವರ್ಣ, ಚುನಾವಣೆ ಹತ್ತಿರ ಬರುವಾಗ ಜಿಲ್ಲೆಯಲ್ಲಿ ಅನೈತಿಕ ಗೂಂಡಾಗಿರಿ ಪ್ರಾರಂಭವಾಗಿದೆ. ಇದಕ್ಕೆಲ್ಲವೂ ಬಿಜೆಪಿಯವರೇ ನೇರ ಹೊಣೆ ಎಂದು ಆರೋಪಿಸಿದರು. ಯಾವ ಧರ್ಮದವರೇ ಆಗಲಿ, ಯಾವುದೇ ಸಂಘಟನೆಯಾಗಲಿ ಯಾರಿಗೂ ಕಾನೂನು ಕೈಗೆತ್ತಿಕೊಳ್ಳುವ ಅಧಿಕಾರವಿಲ್ಲ. ಅಂತವರ ವಿರುದ್ಧ ಪೊಲೀಸ್ ಇಲಾಖೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಮಂಗಳೂರು ಉತ್ತರ ವಿಧಾನಸಭಾ ಅಧ್ಯಕ್ಷ ರತೀಶ್ ಕರ್ಕೆರ, ಜಿಲ್ಲಾ ನಾಯಕರಾದ ಸುಶೀಲ್ ನೊರೊನ್ಹಾ, ದಿನಕರ್ ಉಲ್ಲಾಳ್, ಮಹಿಳಾ ಘಟಕದ ಅಧ್ಯಕ್ಷರಾದ ರಮೀಝಾ ನಾಸೀರ್, ಉಳ್ಳಾಲ ಮಹಿಳಾ ಘಟಕದ ಅಧ್ಯಕ್ಷೆ ಜೊಹರಾ ಖಾದರ್ ,ಮಂಗಳೂರು ದಕ್ಷಿಣ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಸುಮಿತ್ ಸುವರ್ಣ ಹಾಗೂ ರಾಜ್ಯ, ಜಿಲ್ಲಾ ಪಧಾಧಿಕಾರಿಗಳು ಮತ್ತು ಯುವ ಜನತಾದಳದ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

- Advertisement -

ಪ್ರತಿಭಟನೆಯ ನಂತರ ರಾಜ್ಯ ನಾಯಕರು ಮತ್ತು ಯುವ ಜನತಾದಳದ ಕಾರ್ಯಕರ್ತರು ಸೇರಿ ನೈತಿಕ ಪೊಲೀಸ್ ಗಿರಿ ವಿರುದ್ಧ ತಕ್ಷಣ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಪೊಲೀಸರಿಗೆ ಮನವಿ ಸಲ್ಲಿಸಿದರು ಮತ್ತು ಕ್ರಮ ಕೈಗೊಳ್ಳುವಂತೆ ಒತ್ತಾಯ ಮಾಡಿದರು.

Join Whatsapp