ಮಂಗಳೂರು: ಯುವಕನಿಗೆ ಚೂರಿ ಇರಿತ !

Prasthutha|

ಉಳ್ಳಾಲ : ತಂಡವೊಂದು ಯುವಕನಿಗೆ ಚೂರಿಯಿಂದ ಇರಿದ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಅಜ್ಜಿನಡ್ಕ ಉಚ್ಚಿಲ ಬಳಿ ಇಂದು ಬೆಳಿಗ್ಗೆ ನಡೆದಿದೆ.

- Advertisement -

ಅಜ್ಜಿನಡ್ಕ ನಿವಾಸಿ ಆರಿಫ್ ಚೂರಿ ಇರಿತಕ್ಕೊಳಗಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಆರಿಫ್ ಧಕ್ಕೆ ಮೀನು ಮಾರುಕಟ್ಟೆಗೆ ಹೋಗಿ ಬೈಕ್ ನಲ್ಲಿ ವಾಪಸ್ ಮನೆ ಕಡೆ ಬರುವ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ.

ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಗಂಭೀರ ಗಾಯಗೊಂಡ ಆರೀಫ್ ರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Join Whatsapp