ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಪ್ರೇಮಾನಂದ ಶೆಟ್ಟಿ ಹಾಗೂ ಉಪ ಮೇಯರ್ ಆಗಿ ಸುಮಂಗಲ ರಾವ್ ಆಯ್ಕೆಯಾಗಿದ್ದಾರೆ.
ಮಂಗಳವಾರ ಮಂಗಳೂರು ಮಹಾನಗರ ಪಾಲಿಕೆಯ 22ನೇ ಅವಧಿಯ ಮೇಯರ್ ಮತ್ತು ಉಪ ಮೇಯರ್ ಆಯ್ಕೆಯ ಚುನಾವಣೆಯಲ್ಲಿ ಬಿಜೆಪಿ ಸದಸ್ಯರಾದ ಪ್ರೇಮಾನಂದ ಶೆಟ್ಟಿ ಮತ್ತು ಸುಮಂಗಲಾ ರಾವ್ 46 ಮತಗಳನ್ನು ಪಡೆದು ಜಯಗಳಿಸಿದ್ದಾರೆ.
ಮೇಯರ್ ಸ್ಥಾನ ಸಾಮಾನ್ಯ ವರ್ಗಕ್ಕೆ, ಉಪ ಮೇಯರ್ ಸ್ಥಾನ ಸಾಮಾನ್ಯ ವರ್ಗದ ಮಹಿಳೆಗೆ ಮೀಸಲಾಗಿತ್ತು. ಕಾಂಗ್ರೆಸ್‌ನ ಅನಿಲ್ ಕುಮಾರ್ ಮೇಯರ್ ಹುದ್ದೆಗೆ ನಾಮಪತ್ರ ಸಲ್ಲಿಸಿದ್ದರು. ಅವರಿಗೆ ಚುನಾವಣೆಯಲ್ಲಿ 14 ಮತಗಳು ಲಭಿಸಿದೆ.
ಉಪ ಮೇಯರ್ ಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಜೆಸಿಂತಾ ವಿಜಯಿ ಆಲ್ಳ್ರೆಡ್ 14 ಮತಗಳನ್ನು ಪಡೆದಿದ್ದಾರೆ. ಮೇಯರ್ ಮತ್ತು ಉಪ ಮೇಯರ್ ಚುನಾವಣೆಯಲ್ಲಿ ಎಸ್‌ಡಿಪಿಐನ ಇಬ್ಬರು ಸದಸ್ಯರು ತಟಸ್ಥರಾಗಿ ಉಳಿದಿದ್ದರು.
2019ರ ನವೆಂಬರ್‌ನಲ್ಲಿ ನಡೆದ ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ 44, ಕಾಂಗ್ರೆಸ್ 14 ಮತ್ತು ಎಸ್‌ಡಿಪಿಐನ ಇಬ್ಬರು ಸದಸ್ಯರು ಆಯ್ಕೆಯಾಗಿದ್ದರು.