ಮಂಗಳೂರು : ಕೊರೊನಾ ಮಾರ್ಗಸೂಚಿ ಉಲ್ಲಂಘಿಸಿದ ಕಾರಣ ದ.ಕ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮೇ 2ರ ರವಿವಾರದಂದು ಹಲವು ವಾಹನಗಳನ್ನು ಪೊಲೀಸರು ಮುಟ್ಟುಗೋಲು ಹಾಕಿದ್ದಾರೆ.
ದ.ಕ ಜಿಲ್ಲೆಯಲ್ಲಿ 5 ಎಫ್ಐಆರ್ ದಾಖಲಾಗಿದ್ದರೆ, ಮಾಸ್ಕ್ ಧರಿಸದ 266 ಮಂದಿಯ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಲ್ಲದೇ, ಕರ್ಫ್ಯೂ ಉಲ್ಲಂಘಿಸಿದ 17 ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ನಗರದ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ರವಿವಾರ 66 ದ್ವಿಚಕ್ರ ವಾಹನ ಹಾಗೂ ನಾಲ್ಕು ಚಕ್ರದ 4 ವಾಹನಗಳನ್ನು ಜಪ್ತಿ ಮಾಡಲಾಗಿದ್ದು, ಸಾಂಕ್ರಾಮಿಕ ರೋಗ ತಡೆ ಕಾಯ್ದೆಯಡಿ 12 ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಇನ್ನು ಮಾಸ್ಕ್ ಧರಿಸದ 410 ಮಂದಿಯ ವಿರುದ್ದ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ರಾಷ್ಟ್ರೀಯ ವಿಪತ್ತು ಕಾಯ್ದೆಯಡಿ 15 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ.
ಉಡುಪಿಯಲ್ಲಿ, ಲಾಕ್ಡೌನ್ ನಿಯಮ ಉಲ್ಲಂಘಿಸಿದ ಕಾರಣ 37 ವಾಹನಗಳನ್ನು ಮುಟ್ಟುಗೋಲು ಹಾಕಲಾಗಿದೆ. 6 ದ್ವಿಚಕ್ರ ವಾಹನ ಹಾಗೂ 3 ನಾಲ್ಕು ಚಕ್ರದ ವಾಹನ, 6 ಕೊರೊನಾ ನಿಯಮ ಉಲ್ಲಂಘನೆ ಪ್ರಕರಣಗಳು ದಾಖಲಾಗಿವೆ.