ಮಂಗಳೂರು: ಅಂಗಡಿ, ಮನೆಗಳ ಮೇಲೆ NIA ದಾಳಿ| ಐವರು ವಶಕ್ಕೆ

Prasthutha|

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನಂದಾವರದಲ್ಲಿ ಎನ್‌ಐಎ ಅಧಿಕಾರಿಗಳು ದಿಡೀರ್ ದಾಳಿ ನಡೆಸಿ, ಐವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

- Advertisement -

 ಭಾನುವಾರ ಮಧ್ಯಾಹ್ನ 3ರ ಸುಮಾರಿಗೆ ಸುಮಾರು ಮೂರು ಪೊಲೀಸ್ ವಾಹನಗಳೊಂದಿಗೆ ದೆಹಲಿಯಿಂದ ಆಗಮಿಸಿದ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಪಾಣೆಮಂಗಳೂರು ಮತ್ತು ಮೆಲ್ಕಾರ್ ಪ್ರದೇಶದಲ್ಲಿ ಆನ್‌ಲೈನ್ ಸೇವೆ ನೀಡುತ್ತಿದ್ದ ಎರಡು ಅಂಗಡಿಗಳ ಮೇಲೆ ದಾಳಿ ನಡೆಸಿದ್ದಾರೆ. ನಂತರ ನಂದಾವರದ ಮಹಮ್ಮದ್ ಸಿನಾನ್, ಇಕ್ಬಾಲ್, ಸರಫ್ರಾಜ್, ನವಾಜ್ ಮತ್ತು ನೌಫಲ್ ಎಂಬವರ ಮನೆಗಳ ಮೇಲೆ ದಾಳಿ ನಡೆಸಿ ವಿಚಾರಣೆ ನಡೆಸುತ್ತಿದ್ದಾರೆ.

ಯಾವ ಕಾರಣಕ್ಕಾಗಿ ದಾಳಿ ನಡೆಸಲಾಗಿದೆ ಎಂಬ ಬಗ್ಗೆ ಸ್ಥಳೀಯ ಪೊಲೀಸರಾಗಲೀ, ಉನ್ನತಾಧಿಕಾರಿಗಳಾಗಲಿ ಮಾಹಿತಿ ನೀಡಿಲ್ಲ.

Join Whatsapp