ಗುವಾಹಟಿ: ಮಣಿಪುರದಲ್ಲಿ ಭಾನುವಾರ ಭುಗಿಲೆದ್ದ ಹಿಂಸಾಚಾರದಲ್ಲಿ ಪೊಲೀಸ್ ಸೇರಿದಂತೆ 5 ಮಂದಿ ಮೃತಪಟ್ಟಿದ್ದು, 12ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಒಂದು ತಿಂಗಳಿನಿಂದ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರವು ಕನಿಷ್ಠ 70 ಮಂದಿಯನ್ನು ಬಲಿಪಡೆದಿದೆ. ಹಿಂಸಾಚಾರ ಪೀಡಿತ ರಾಜ್ಯಕ್ಕೆ ಗೃಹ ಸಚಿವ ಅಮಿತ್ ಶಾ ಅವರ ಭೇಟಿಗೆ ಗಂಟೆಗಳ ಮೊದಲು ಇದು ಸಂಭವಿಸಿದೆ. ಗೃಹ ಸಚಿವ ಅಮಿತ್ ಶಾ ಇಂದು ಮಣಿಪುರಕ್ಕೆ ಭೇಟಿ ನೀಡಲಿದ್ದಾರೆ.
ಹಿಂಸಾಚಾರ ಮತ್ತಷ್ಟು ಉಲ್ಬಣಗೊಳ್ಳುತ್ತಿದ್ದಂತೆಯೇ ಹಲವಾರು ಪ್ರದೇಶಗಳಲ್ಲಿ ಕರ್ಫ್ಯೂ ಮತ್ತು ಇಂಟರ್ನೆಟ್ ನಿಷೇಧವನ್ನು ವಿಧಿಸಲಾಯಿತು. ಜನಾಂಗೀಯ ಹಿಂಸಾಚಾರಕ್ಕೆ ತುತ್ತಾಗಿರುವ ಮಣಿಪುರ ರಾಜ್ಯದ ಹಲವು ಪ್ರದೇಶಗಳಲ್ಲಿ ಎಂಟು ಗಂಟೆಗಳ ಕಾಲ ಪೊಲೀಸ್ ಕಮಾಂಡೋಗಳು ನಡೆಸಿದ ಕಾರ್ಯಾಚರಣೆಯಲ್ಲಿ 40 ಮಂದಿ ಬಂಡುಕೋರರನ್ನು ಹತ್ಯೆಮಾಡಲಾಗಿದೆ.