Home ಟಾಪ್ ಸುದ್ದಿಗಳು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ: ಮಣಿಪುರ ಸಿಎಂ ಬಿರೇನ್ ಸಿಂಗ್

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ: ಮಣಿಪುರ ಸಿಎಂ ಬಿರೇನ್ ಸಿಂಗ್

ಈಶಾನ್ಯ ರಾಜ್ಯ ಮಣಿಪುರದಲ್ಲಿ ಭುಗಿಲೆದ್ದಿರುವ ಹಿಂಸಾಚಾರ ಕೊನೆಗೊಳ್ಳದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರ ರಾಜೀನಾಮೆಗೆ ವಿರೋಧ ಪಕ್ಷಗಳು ಆಗ್ರಹಿಸಿದ್ದವು. ಇಂದು (ಜೂನ್ 30, ಶುಕ್ರವಾರ) ರಾಜ್ಯಪಾಲರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸುತ್ತಾರೆ ಎಂದು ಹೇಳಲಾಗಿತ್ತು ಆದರೆ ರಾಜೀನಾಮೆ ನೀಡುವುದಿಲ್ಲ ಎಂದು ಹೇಳಿದ್ದಾರೆ.


ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರು ರಾಜೀನಾಮೆ ನೀಡುವುದಿಲ್ಲ ಎಂದು ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ”ಈ ನಿರ್ಣಾಯಕ ಘಟ್ಟದಲ್ಲಿ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಲು ಬಯಸುತ್ತೇನೆ” ಎಂದು ತಿಳಿಸಿದ್ದಾರೆ.

Join Whatsapp
Exit mobile version