ಮಣಿಪುರ ಮುಖ್ಯಮಂತ್ರಿ ಬೆಂಗಾವಲು ವಾಹನದ ಮೇಲೆ ದಾಳಿ: ಓರ್ವ ಭದ್ರತಾ ಸಿಬ್ಬಂದಿಗೆ ಗಾಯ

Prasthutha|

ಮಣಿಪುರ ಮುಖ್ಯಮಂತ್ರಿ ಬೆಂಗಾವಲು ವಾಹನದ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದು, ಓರ್ವ ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ. ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರ ಬೆಂಗಾವಲು ವಾಹನದ ಮೇಲೆ ಸೋಮವಾರ ಕಾಂಗ್ಪೋಕ್ಪಿ ಜಿಲ್ಲೆಯಲ್ಲಿ ಶಸ್ತ್ರಸಜ್ಜಿತರು ಹೊಂಚುದಾಳಿ ನಡೆಸಿದ್ದು, ಓರ್ವ ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ.

- Advertisement -

ಮುಖ್ಯಮಂತ್ರಿ ಕಚೇರಿಯ ಮೂಲಗಳ ಪ್ರಕಾರ, ಬೆಂಗಾವಲು ಪಡೆ ಇಂಫಾಲ್ನಿಂದ ಜಿರಿಬಾಮ್ ಜಿಲ್ಲೆಗೆ ತೆರಳುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿ-37 ರ ರಲ್ಲಿ ಬೆಳಗ್ಗೆ 10.30 ರ ಸುಮಾರಿಗೆ ದಾಳಿ ನಡೆಸಿತು.

ಜೂನ್ 6 ರಂದು ಅಪರಿಚಿತ ದುಷ್ಕರ್ಮಿಗಳು ವ್ಯಕ್ತಿಯ ಶಿರಚ್ಛೇದ ಮಾಡಿದ ನಂತರ ಕಳೆದ ಕೆಲವು ದಿನಗಳಿಂದ ಅಶಾಂತಿಯಿಂದ ನಲುಗಿರುವ ಜಿರಿಬಾಮ್ ಗೆ ಭೇಟಿ ನೀಡಲು ಮುಖ್ಯಮಂತ್ರಿ ಯೋಜಿಸಿದ್ದರು.

Join Whatsapp
Exit mobile version