ಇಂಫಾಲ್: ಮಣಿಪುರದ ಸರ್ಕಾರಿ ಕಚೇರಿಗಳಿಗೆ ವಾರದಲ್ಲಿ ಐದು ದಿನಗಳು ಮಾತ್ರ ಕೆಲಸ ದಿನವಾಗಿ ಘೋಷಿಸಿದ್ದು, ನೌಕರರ ಕೆಲಸದ ಸಮವನ್ನು ಹೆಚ್ಚಿಸಲಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.
ಸತತ ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಎನ್. ಬಿರೇನ್ ಸಿಂಗ್ ಅವರು ಮೊದಲ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಂಡಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ಕೆಲಸದ ಸಮಯ ಬದಲಾವಣೆಗೊಂಡಿದ್ದು, ಬೆಳಗ್ಗೆ 9ರಿಂದ ಪ್ರಾರಂಭವಾಗುತ್ತದೆ ಎಂದು ತಿಳಿಸಿದರು.
ಇದರ ಜೊತಗೆ ಶಾಲೆಯ ಸಮಯವನ್ನು ಬದಲಾವಣೆ ಮಾಡಲಾಗಿದೆ. ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಈ ನಿರ್ಧಾರವನ್ನು ಕೈಗೊಂಡಿದ್ದು, ಬೆಳಗ್ಗೆ 8 ಗಂಟೆಗೆ ಎಲ್ಲಾ ತರಗತಿಗಳು ಪ್ರಾರಂಭವಾಗುತ್ತವೆ. ಇದರಿಂದಾಗಿ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಸಮಯ ಸಾಕಷ್ಟು ಸಮಯ ದೊರೆಯುತ್ತದೆ ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ.