ಮಣಿಪುರದ ಸರ್ಕಾರಿ ನೌಕರರಿಗೆ ವಾರದಲ್ಲಿ 5 ದಿನ ಮಾತ್ರ ಕೆಲಸ !

Prasthutha|

ಇಂಫಾಲ್: ಮಣಿಪುರದ ಸರ್ಕಾರಿ ಕಚೇರಿಗಳಿಗೆ ವಾರದಲ್ಲಿ ಐದು ದಿನಗಳು ಮಾತ್ರ ಕೆಲಸ ದಿನವಾಗಿ ಘೋಷಿಸಿದ್ದು, ನೌಕರರ ಕೆಲಸದ ಸಮವನ್ನು ಹೆಚ್ಚಿಸಲಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

- Advertisement -

ಸತತ ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಎನ್. ಬಿರೇನ್ ಸಿಂಗ್ ಅವರು ಮೊದಲ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಂಡಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ಕೆಲಸದ ಸಮಯ ಬದಲಾವಣೆಗೊಂಡಿದ್ದು, ಬೆಳಗ್ಗೆ 9ರಿಂದ ಪ್ರಾರಂಭವಾಗುತ್ತದೆ ಎಂದು ತಿಳಿಸಿದರು.

ಇದರ ಜೊತಗೆ ಶಾಲೆಯ ಸಮಯವನ್ನು ಬದಲಾವಣೆ ಮಾಡಲಾಗಿದೆ. ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಈ ನಿರ್ಧಾರವನ್ನು ಕೈಗೊಂಡಿದ್ದು, ಬೆಳಗ್ಗೆ 8 ಗಂಟೆಗೆ ಎಲ್ಲಾ ತರಗತಿಗಳು ಪ್ರಾರಂಭವಾಗುತ್ತವೆ. ಇದರಿಂದಾಗಿ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಸಮಯ ಸಾಕಷ್ಟು ಸಮಯ ದೊರೆಯುತ್ತದೆ ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ. 

Join Whatsapp
Exit mobile version