ಮಂಗಳೂರು: ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ನಡೆಸಿರುವ ಘಟನೆಯನ್ನು ಖಂಡಿಸಿ ನಾಳೆ ಮಂಗಳೂರಿನಲ್ಲಿ
ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಸೋಮವಾರ ಬೆಳಿಗ್ಗೆ 11.30ಕ್ಕೆ ಮಂಗಳೂರು ನಗರದ ಕ್ಲಾಕ್ ಟವರ್ ಬಳಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ವಿಮೆನ್ ಇಂಡಿಯಾ ಮೂವ್ಮೆಂಟ್ ದ.ಕ. ಜಿಲ್ಲಾಧ್ಯಕ್ಷೆ ನೌರೀನ್ ಆಲಂಪಾಡಿ ಹೇಳಿದ್ದಾರೆ.