ಮಣಿಪುರ ಹಿಂಸಾಚಾರ : ಸಚಿವೆ ಮನೆಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

Prasthutha|

ಗುವಾಹಟಿ: ಮಣಿಪುರದ ಏಕೈಕ ಮಹಿಳಾ ಸಚಿವರ ಅಧಿಕೃತ ನಿವಾಸಕ್ಕೆ ದುಷ್ಕರ್ಮಿಗಳ ತಂಡ ಬೆಂಕಿ ಹಚ್ಚಿದ ಘಟನೆ ಬುಧವಾರ ನಡೆದಿದೆ.

- Advertisement -

ಮೈಟಿ ಮತ್ತು ಕುಕಿ ಸಮುದಾಯಗಳ ನಡುವಿನ ಜನಾಂಗೀಯ ಘರ್ಷಣೆ ಹಿನ್ನೆಲೆ ಇಂಫಾಲ್ ಪಶ್ಚಿಮ ಜಿಲ್ಲೆಯ ಲಂಫೇಲ್ ಪ್ರದೇಶದಲ್ಲಿರುವ ಕೈಗಾರಿಕಾ ಸಚಿವೆ ನೆಮ್ಚಾ ಕಿಪ್ಗೆನ್ ಅವರ ಬಂಗಲೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ.

 ಘಟನೆ ನಡೆದ ವೇಳೆ ನಿವಾಸದಲ್ಲಿ ಯಾರು ಇಲ್ಲದೇ ಇರುವುದರಿಂದ ಭಾರೀ ಅನಾಹುತ ತಪ್ಪಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿಗಳು ತಲುಪಿದ್ದು, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

- Advertisement -

ಕಿಪ್ಗೆನ್ ಕುಕಿ ಸಮುದಾಯದ ನಾಯಕಿ ಆಗಿದ್ದಾರೆ. ಘಟನೆಯ ಕುರಿತಾಗಿ ಇದುವರೆಗೂ ಯಾವುದೇ ಗುಂಪು ಕೂಡ ಜವಾಬ್ದಾರಿಯನ್ನು ವಹಿಸಿಕೊಂಡಿಲ್ಲ. ಸದ್ಯ ಹಿರಿಯ ಅಧಿಕಾರಿಗಳ ನೇತೃತ್ವದ ಭದ್ರತಾ ಪಡೆಗಳು ಸ್ಥಳಕ್ಕೆ ಧಾವಿಸಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ.

ಕಳೆದ ವರ್ಷದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯ ವಿಧಾನಸಭೆಗೆ ಆಯ್ಕೆಯಾದ ಕಿಪ್ಗೆನ್, ಮುಖ್ಯಮಂತ್ರಿ ಎನ್​​ ಬಿರೇನ್ ಸಿಂಗ್ ನೇತೃತ್ವದ 12 ಸದಸ್ಯರ ಸಂಪುಟದಲ್ಲಿ ಏಕೈಕ ಮಹಿಳಾ ಸಚಿವರಾಗಿದ್ದಾರೆ.



Join Whatsapp