ಮಣಿಪುರ ಬೆತ್ತಲೆ ಮೆರವಣಿಗೆ ಪ್ರಕರಣ: 14 ಆರೋಪಿಗಳ ಗುರುತು ಪತ್ತೆ

Prasthutha|

ಮಣಿಪುರದಲ್ಲಿ ಮಹಿಳೆಯರನ್ನು ಬೆತ್ತಲುಗೊಳಿಸಿ ಮೆರವಣಿಗೆ ಮಾಡಿದ್ದ ಪ್ರಕರಣದಲ್ಲಿ ಭಾಗಿಯಾಗಿದ್ದ ಇನ್ನೂ 14 ಜನರ ಗುರುತು ಪತ್ತೆ ಮಾಡಲಾಗಿದ್ದು, ಅವರ ಬಂಧನಕ್ಕೂ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಮಣಿಪುರ ಪೊಲೀಸರು ತಿಳಿಸಿದ್ದಾರೆ.

- Advertisement -


ಮೇ 4ರಂದು ಕಾಂಗ್ ಪೋಕ್ಸಿ ಜಿಲ್ಲೆಯಲ್ಲಿ ನಡೆದ ಘಟನೆಯ ವೀಡಿಯೋ ಜುಲೈ 19ರಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ಬಳಿಕ ದೇಶಾದ್ಯಂತ ಆಕ್ರೋಶ ವ್ಯಕ್ತವಾಯಿತು. ಬಳಿಕ ಪ್ರಕರಣ ಸಂಬಂಧ 6 ಜನರನ್ನು ಪೊಲೀಸರು ಬಂಧಿಸಿದ್ದಾರೆ.

Join Whatsapp