ಮಣಿಪುರ ಬೆತ್ತಲೆ ಮೆರವಣಿಗೆ ಪ್ರಕರಣ: 7ನೇ ಆರೋಪಿಯ ಬಂಧನ

Prasthutha|

ಇಂಫಾಲ: ಮಣಿಪುರದಲ್ಲಿ ಬುಡಕಟ್ಟು ಸಮುದಾಯದ ಮಹಿಳೆಯರನ್ನು ಬೆತ್ತಲುಗೊಳಿಸಿ, ರಸ್ತೆಯಲ್ಲಿ ಮೆರವಣಿಗೆ ನಡೆಸಿ, ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -


ಪ್ರಕರಣ ಸಂಬಂಧ ಈ ವರೆಗೂ ಪೊಲೀಸರು ಅಪ್ರಾಪ್ತ ಬಾಲಕ ಸೇರಿದಂತೆ 6 ಮಂದಿಯನ್ನು ಬಂಧನಕ್ಕೊಳಪಡಿಸಿದ್ದರು. ಇದೀಗ ತೌಬಲ್ ಜಿಲ್ಲೆಯಲ್ಲಿ ಮತ್ತೋರ್ವ ಆರೋಪಿಯನ್ನು ಬಂಧನಕ್ಕೊಳಪಡಿಸಿದ್ದಾರೆ. ಇದರೊಂದಿಗೆ ಪ್ರಕರಣ ಸಂಬಂಧ ಈ ವರೆಗೂ 7 ಆರೋಪಿಗಳು ಬಂಧನಕ್ಕೊಳಗಾಗಿದ್ದಾರೆ.


ಮೇ 4ರಂದು ಕಾಂಗ್‌ಪೊಕ್ಪಿ ಜಿಲ್ಲೆಯಲ್ಲಿ ನಡೆದಿದ್ದ ಹಿಂಸಾಚಾರದ ವೇಳೆ ಮಹಿಳೆಯರನ್ನು ಬೆತ್ತಲುಗೊಳಿಸಿ ಮೆರವಣಿಗೆ ಮಾಡಿದ್ದ ವಿಡಿಯೊ ಜುಲೈ 19ರಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿತ್ತು. ಇದರಿಂದ ಈಶಾನ್ಯ ರಾಜ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನಗೊಂಡಿತ್ತು.

Join Whatsapp