Home ಟಾಪ್ ಸುದ್ದಿಗಳು ಮಣಿಪುರದಲ್ಲಿ ಮುಂದುವರಿದ ವಿದ್ಯಾರ್ಥಿಗಳ ಪ್ರತಿಭಟನೆ: 3 ಜಿಲ್ಲೆಗಳಲ್ಲಿ ಕರ್ಫ್ಯೂ

ಮಣಿಪುರದಲ್ಲಿ ಮುಂದುವರಿದ ವಿದ್ಯಾರ್ಥಿಗಳ ಪ್ರತಿಭಟನೆ: 3 ಜಿಲ್ಲೆಗಳಲ್ಲಿ ಕರ್ಫ್ಯೂ

ಇಂಫಾಲ್: ರಾಜ್ಯದಲ್ಲಿ ಇತ್ತೀಚಿಗೆ ನಡೆದ ಡ್ರೋನ್ ದಾಳಿಯನ್ನು ಖಂಡಿಸಿ ಮಂಗಳವಾರವೂ ವಿದ್ಯಾರ್ಥಿಗಳು ಹಿಂಸಾತ್ಮಕ ಪ್ರತಿಭಟನೆ ನಡೆಸುವ ಸಾಧ್ಯತೆ ಹಿನ್ನೆಲೆಯಲ್ಲಿ ಮೈತೇಯಿ ಸಮುದಾಯದ ಪ್ರಾಬಲ್ಯವಿರುವ ತೌಬಲ್, ಇಂಫಾಲ್ ಪೂರ್ವ ಮತ್ತು ಇಂಫಾಲ್ ಪಶ್ಚಿಮ ಜಿಲ್ಲೆಗಳಲ್ಲಿ ಕರ್ಫ್ಯೂ ಜಾರಿಗೊಳಿಸಿ ಮಣಿಪುರ ಸರ್ಕಾರ ಆದೇಶ ಹೊರಡಿಸಿದೆ.


ಇಂಫಾಲ್ ವೆಸ್ಟ್ ಆಡಳಿತವು ಮುಂದಿನ ಆದೇಶದವರೆಗೆ “ಯಾವುದೇ ವ್ಯಕ್ತಿ(ಗಳ) ತಮ್ಮ ನಿವಾಸಗಳ ಹೊರಗೆ ಸಂಚರಿಸುವುದನ್ನು” ನಿರ್ಬಂಧಿಸಿದೆ. ಅಗತ್ಯ ಸೇವೆಗಳು, ಮಾಧ್ಯಮಗಳಿಗೆ ವಿನಾಯಿತಿ ನೀಡಿದೆ.


ಸೆಪ್ಟೆಂಬರ್ 1 ರಿಂದ ರಾಜ್ಯದಲ್ಲಿ ಜನಾಂಗೀಯ ಹಿಂಸಾಚಾರದ ವಿವಿಧ ಘಟನೆಗಳಲ್ಲಿ 11 ಜನರು ಸಾವನ್ನಪ್ಪಿದ್ದಾರೆ. ವಿದ್ಯಾರ್ಥಿಗಳು ಕಣಿವೆ ಪ್ರದೇಶಗಳಲ್ಲಿ, ವಿಶೇಷವಾಗಿ ತೌಬಾಲ್ ಮತ್ತು ಇಂಫಾಲಲ್ಲಿ ಬೃಹತ್ ಪ್ರತಿಭಟನೆಗಳನ್ನು ನಡೆಸಿದರು.


ತೌಬಲ್ ನಲ್ಲಿ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಘರ್ಷಣೆ ನಡೆದ ನಂತರ ಪೊಲೀಸ್ ಸಿಬ್ಬಂದಿ ಸೇರಿದಂತೆ ಕನಿಷ್ಠ 20 ಜನರು ಗಾಯಗೊಂಡಿದ್ದಾರೆ.

Join Whatsapp
Exit mobile version