ಮಣಿಪುರ: ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳು ಕೊಲೆಯಾದ ಸ್ಥಿತಿಯಲ್ಲಿ ಪತ್ತೆ

Prasthutha|

ಇಂಫಾಲ: ಜನಾಂಗೀಯ ಹಿಂಸಾಚಾರದಿಂದ ತತ್ತರಿಸಿರುವ ಮಣಿಪುರದಲ್ಲಿ ಮತ್ತೊಂದು ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜುಲೈ ತಿಂಗಳಲ್ಲಿ ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳು ಶವವಾಗಿ ಪತ್ತೆಯಾಗಿದ್ದಾರೆ.

- Advertisement -

ಈ ವಿದ್ಯಾರ್ಥಿಗಳನ್ನು ಶಸ್ತ್ರಸಜ್ಜಿತ ತಂಡ ಹತ್ಯೆ ಮಾಡಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಸೋಮವಾರ ರಾತ್ರಿಯಿಂದಲೇ ಮೃತದೇಹಗಳ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಮತ್ತೆ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಇಬ್ಬರು ವಿದ್ಯಾರ್ಥಿಗಳ ಶವವಿರುವ ಫೋಟೋಗಳು ವೈರಲ್ ಆಗುತ್ತಿವೆ.

Join Whatsapp