Home ಟಾಪ್ ಸುದ್ದಿಗಳು ಮಣಿಪುರ: ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳು ಕೊಲೆಯಾದ ಸ್ಥಿತಿಯಲ್ಲಿ ಪತ್ತೆ

ಮಣಿಪುರ: ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳು ಕೊಲೆಯಾದ ಸ್ಥಿತಿಯಲ್ಲಿ ಪತ್ತೆ

ಇಂಫಾಲ: ಜನಾಂಗೀಯ ಹಿಂಸಾಚಾರದಿಂದ ತತ್ತರಿಸಿರುವ ಮಣಿಪುರದಲ್ಲಿ ಮತ್ತೊಂದು ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜುಲೈ ತಿಂಗಳಲ್ಲಿ ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳು ಶವವಾಗಿ ಪತ್ತೆಯಾಗಿದ್ದಾರೆ.

ಈ ವಿದ್ಯಾರ್ಥಿಗಳನ್ನು ಶಸ್ತ್ರಸಜ್ಜಿತ ತಂಡ ಹತ್ಯೆ ಮಾಡಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಸೋಮವಾರ ರಾತ್ರಿಯಿಂದಲೇ ಮೃತದೇಹಗಳ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಮತ್ತೆ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಇಬ್ಬರು ವಿದ್ಯಾರ್ಥಿಗಳ ಶವವಿರುವ ಫೋಟೋಗಳು ವೈರಲ್ ಆಗುತ್ತಿವೆ.

Join Whatsapp
Exit mobile version