ಮಣಿಪುರ ಹಿಂಸಾಚಾರ: ಸಿಬಿಐ ಅಡಿಯಲ್ಲಿನ ಪ್ರಕರಣಗಳ ವಿಚಾರಣೆ ಅಸ್ಸಾಂ ಹೈಕೋರ್ಟ್’ಗೆ

Prasthutha|

ಮಣಿಪುರ : ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಿಬಿಐ ತನಿಖೆ ನಡೆಸುತ್ತಿರುವ ಎಲ್ಲ ಪ್ರಕರಣಗಳ ವಿಚಾರಣೆಯನ್ನು ಅಸ್ಸಾಂ ಹೈಕೋರ್ಟ್ಗೆ ವರ್ಗಾಯಿಸಲಾಗಿದೆ ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿದೆ.

- Advertisement -

ಈ ಪ್ರಕರಣಗಳನ್ನು ವ್ಯವಹರಿಸಲು ಒಬ್ಬರು ಅಥವಾ ಹೆಚ್ಚಿನ ನ್ಯಾಯಾಂಗ ಅಧಿಕಾರಿಗಳನ್ನು ನಾಮನಿರ್ದೇಶನ ಮಾಡುವಂತೆ ಗುವಾಹಾಟಿ ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶರನ್ನು ಸುಪ್ರೀಂ ಕೇಳಿದೆ.

ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠವು ಮಣಿಪುರ ಹಿಂಸಾಚಾರದ ಅರ್ಜಿಯನ್ನು ವಿಚಾರಣೆ ನಡೆಸಿದೆ. ಪ್ರಕರಣಕ್ಕೆ ಸಂಬಂಧಿಸದಂತೆ ಹಲವು ನಿರ್ದೇಶನಗಳನ್ನು ನೀಡಿದೆ.

- Advertisement -

ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಈಗಾಗಲೇ ನ್ಯಾಯಂಗ ಬಂಧನಕ್ಕೆ ಒಳಪಡಿಸಲಾಗಿದ್ದು, ಅವರನ್ನು ವಿಚಾರಣೆಗೆ ಮಣಿಪುರದಿಂದ ಗೌಹಾಟಿಯ ಹೈಕೋರ್ಟ್ಗೆ ಕರೆದುಕೊಂಡ ಬರಲು ಸಾಧ್ಯವಾಗದಿದ್ದರೆ, ಆನ್ಲೈನ್ ಮೂಲಕವೇ ಅವರನ್ನು ನ್ಯಾಯಧೀಶರ ಮುಂದೆ ಹಾಜರು ಪಡಿಸಬಹುದು ಎಂದು ಹೇಳಿದೆ. ಒಂದು ವೇಳೆ ನೆಟ್ವರ್ಕ್ ಸಮಸ್ಯೆ ಅಥವಾ ತಾಂತ್ರಿಕ ದೋಷಗಳಿಂದ ಆನ್ಲೈನ್ನಲ್ಲಿ ಹಾಜರುಪಡಿಸಲು ಸಾಧ್ಯವಾಗದಿದ್ದಾರೆ ಅಥವಾ ಅವರನ್ನು ಕೋರ್ಟ್ ಮುಂದೆ ಕರೆದುಕೊಂಡು ಬರುವುದು ಅನಿವಾರ್ಯ ಇದೆ ಎಂದು ಕಂಡು ಬಂದರೆ ಮಾತ್ರ ಅವರನ್ನು ನ್ಯಾಯಲಯದ ಮುಂದೆ ಕರೆದುಕೊಂಡು ಬರಲು ಅನುಮತಿ ನೀಡಲಾಗಿದೆ.

ಈ ಜನಾಂಗೀಯ ಹಿಂಸಾಚಾರದಿಂದ ಹಲವಾರು ಮಣಿಪುರ ನಿವಾಸಿಗಳು ತಮ್ಮ ಗುರುತಿನ ದಾಖಲೆಗಳನ್ನು ಕಳೆದುಕೊಂಡಿರುವುದನ್ನು ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಗಮನಿಸಿದ್ದು, ಈಗಾಗಲೇ ಸುಪ್ರೀಂ ನೇಮಿಸಿದ ಸಮಿತಿಯು ಆಧಾರ್ ಕಾರ್ಡ್‌ ಮತ್ತು ಇತರ ದಾಖಲೆಗಳನ್ನು ತಕ್ಷಣದಿಂದಲೇ ನೀಡಲು ರಾಜ್ಯ ಸರ್ಕಾರ ಮತ್ತು ಯುಐಡಿಎಐ ಸೇರಿದಂತೆ ಇತರರಿಗೆ ಇಲಾಖೆ ನಿರ್ದೇಶನ ರವಾನಿಸುವಂತೆ ಸುಪ್ರೀಂ ಕೋರ್ಟ್‌ಗೆ ಹೇಳಿದೆ.



Join Whatsapp