Home ಟಾಪ್ ಸುದ್ದಿಗಳು ಮಣಿಪುರ ಹಿಂಸಾಚಾರ | ನಾನು ಭಾರತೀಯ ಎಂದು ಹೇಳಿಕೊಳ್ಳಲು ನಾಚಿಕೆಯಾಗುತ್ತಿದೆ: ಬಿಜೆಪಿ ಸಂಸದ ಗೌತಮ್ ಗಂಭೀರ್

ಮಣಿಪುರ ಹಿಂಸಾಚಾರ | ನಾನು ಭಾರತೀಯ ಎಂದು ಹೇಳಿಕೊಳ್ಳಲು ನಾಚಿಕೆಯಾಗುತ್ತಿದೆ: ಬಿಜೆಪಿ ಸಂಸದ ಗೌತಮ್ ಗಂಭೀರ್

‘ಘಟನೆಗಳು ನಡೆಯದಂತೆ ನೋಡಿಕೊಳ್ಳುವುದು ರಾಜ್ಯದ ಮುಖ್ಯಮಂತ್ರಿಯ ಕರ್ತವ್ಯ’


ನವದೆಹಲಿ: ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ಘಟನೆ ಅತ್ಯಂತ ನಾಚಿಕೆಗೇಡಿನ ಸಂಗತಿಯಾಗಿದ್ದು, ನಾನು ಭಾರತೀಯ ಎಂದು ಹೇಳಿಕೊಳ್ಳಲು ನಾಚಿಕೆಯಾಗುತ್ತಿದೆ ಎಂದು ಬಿಜೆಪಿ ಸಂಸದ ಗೌತಮ್ ಗಂಭೀರ್ ಹೇಳಿದ್ದಾರೆ.


ಮಣಿಪುರದಲ್ಲಿ ನಡೆದ ಘಟನೆಗಳು ಸಾಮಾನ್ಯ ಘಟನೆಯಲ್ಲ. ಇಂತಹ ಘಟನೆಗಳು ನಡೆದಂತೆ ನೋಡಿಕೊಳ್ಳುವುದು ರಾಜ್ಯದ ಮುಖ್ಯಮಂತ್ರಿಯ ಕರ್ತವ್ಯ ಎಂದು ತಿಳಿಸಿದ್ದಾರೆ.


ಈ ಸಮಸ್ಯೆ ಕೇವಲ ಮಣಿಪುರಕ್ಕೆ ಸೀಮಿತವಾಗಿಲ್ಲ. ಇದು ಇಡೀ ದೇಶ ತಲೆ ತಗ್ಗಿಸುವಂತೆ ಮಾಡಿದೆ. ಆದ್ದರಿಂದ ಇದನ್ನು ರಾಜಕೀಯಗೊಳಿಸಬಾರದು ಎಂದು ಗಂಭೀರ್ ಹೇಳಿದ್ದಾರೆ.

Join Whatsapp
Exit mobile version