ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಹಲವರಿಗೆ ಗಾಯ

Prasthutha|

ಗುವಾಹಟಿ: ರಾಜ್ಯ ರಾಜಧಾನಿ ಇಂಫಾಲ್ ಸೇರಿದಂತೆ ಮಣಿಪುರದ ಕೆಲವು ಭಾಗಗಳಲ್ಲಿ ಹಿಂಸಾಚಾರ ಮತ್ತೊಮ್ಮೆ ಉಲ್ಬಣಗೊಂಡಿದ್ದು, ವಿವಿಧ ಪ್ರದೇಶಗಳಲ್ಲಿ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಸಂಘರ್ಷವುಂಟಾಗಿದೆ.

- Advertisement -

 ಪೊಲೀಸರು ಲಾಠಿ ಪ್ರಹಾರ ಮತ್ತು ಅಶ್ರುವಾಯು ಶೆಲ್‌ಗಳನ್ನು ಬಳಸಿದ್ದು, ಅನೇಕ ಜನರು ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ. ಸೆಪ್ಟೆಂಬರ್ 16 ರಂದು ಭದ್ರತಾ ಪಡೆಗಳ ಸಮವಸ್ತ್ರದಲ್ಲಿ ಮತ್ತು ಅತ್ಯಾಧುನಿಕ ಶಸ್ತ್ರಾಸ್ತ್ರಗಳೊಂದಿಗೆ ಸಿಕ್ಕಿಬಿದ್ದ ಐವರನ್ನು ಬಂಧಿಸಿದ ನಂತರ ಪರಿಸ್ಥಿತಿ ಉಲ್ಬಣಗೊಳ್ಳುತ್ತಿದೆ.

ಇದು ಮಣಿಪುರ ಪ್ರದೇಶಗಳಲ್ಲಿ ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಬಂಧಿತರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ, ಸ್ಥಳೀಯರು ಮಂಗಳವಾರದಿಂದ ಕಣಿವೆಯಲ್ಲಿ 48 ಗಂಟೆಗಳ ಲಾಕ್‌ಡೌನ್ ಜಾರಿಗೊಳಿಸಿದ್ದಾರೆ.

- Advertisement -

ಹಲವಾರು ಸ್ಥಳಗಳಲ್ಲಿ ಉದ್ರಿಕ್ತ ಪ್ರತಿಭಟನಾಕಾರರು ಪೊಲೀಸರು ಮತ್ತು ಇತರ ಭದ್ರತಾ ಏಜೆನ್ಸಿಗಳ ಸಿಬ್ಬಂದಿ ಜತೆ ಜಗಳವಾಡಿದ್ದಾರೆ. ಗುಂಪು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದು ಅಶ್ರುವಾಯು ಪ್ರಯೋಗಿಸಿದರು. ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಸಿಂಜಾಮೆಯಿ ಪೊಲೀಸ್ ಠಾಣೆಯ ಹೊರಗೆ ಗುಂಪು ಮತ್ತು ಪೊಲೀಸರ ನಡುವೆ ಘರ್ಷಣೆಗಳು ನಡೆದವು. ಅಲ್ಲಿ ಪೊಲೀಸರು ಅಶ್ರುವಾಯು ಶೆಲ್‌ಗಳನ್ನು ಬಳಸಿದರು. ಮೂವರು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಣಿಪುರದಲ್ಲಿ ಮೇ ತಿಂಗಳ ಆರಂಭದಿಂದಲೂ ಜನಾಂಗೀಯ ಹಿಂಸಾಚಾರಕ್ಕೆ ಸಾಕ್ಷಿಯಾಗಿದೆ, ಇದರಲ್ಲಿ 150 ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದರು.

Join Whatsapp