ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ಎರಡು ಮನೆಗಳಿಗೆ ಬೆಂಕಿ, ಗುಂಡಿನ ಸದ್ದು

Prasthutha|

ಇಂಫಾಲ: ಮಣಿಪುರದ ಇಂಫಾಲ ಜಿಲ್ಲೆಯಲ್ಲಿ ಹೊಸ ಹಿಂಸಾಚಾರ ಭುಗಿಲೆದ್ದಿದ್ದು, ಕನಿಷ್ಠ ಎರಡು ಮನೆಗಳಿಗೆ ಬೆಂಕಿ ಹಚ್ಚಲಾಗಿದೆ ಮತ್ತು ಹಲವಾರು ಸುತ್ತು ಗುಂಡುಗಳನ್ನು ಹಾರಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

- Advertisement -


ಕೀತೆಲ್ಮನಬಿ ಎನ್ನುವ ಪ್ರದೇಶದಲ್ಲಿ ಬುಧವಾರ ರಾತ್ರಿ 10 ಗಂಟೆಗೆ ಘಟನೆ ನಡೆದಿದೆ. ದಾಳಿ ನಡೆದ ಬಳಿಕ ಸ್ಥಳದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ. ಭದ್ರತೆಗಾಗಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೇ 3ರಂದು ಮಣಿಪುರದಲ್ಲಿ ಜನಾಂಗೀಯ ಘರ್ಷಣೆಗಳು ಪ್ರಾರಂಭವಾದಾಗಿನಿಂದ 180ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ನೂರಾರು ಜನರು ಗಾಯಗೊಂಡಿದ್ದಾರೆ.



Join Whatsapp