ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ: ಪ್ರಮುಖ ಆರೋಪಿ ಮನೆಗೆ ಬೆಂಕಿ ಹಾಕಿ ಆಕ್ರೋಶ

Prasthutha|

ಇಂಫಾಲ್: ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ , ಅತ್ಯಾಚಾರ ಮಾಡಿದ್ದ ಪ್ರಕರಣದ ಪ್ರಮುಖ ಆರೋಪಿ ಹುಯಿರೆಮ್ ಹೆರಾದಾಸ್ ಸಿಂಗ್ ಮನೆಯನ್ನು ಬೆಂಕಿ ಹಾಕಿ ಸುಟ್ಟುಹಾಕುವ ಮೂಲಕ ಪ್ರತಿಭಟನಾಕಾರರ ಗುಂಪು ಆಕ್ರೋಶ ವ್ಯಕ್ತಪಡಿಸಿದೆ.

- Advertisement -

ಮಣಿಪುರದ ಗುಡ್ಡಗಾಡು ಪ್ರದೇಶಗಳಲ್ಲಿ ಇಬ್ಬರು ಮಹಿಳೆಯರನ್ನ ಬೆತ್ತಲೆಯಾಗಿ ಮೆರವಣಿಗೆ ಮಾಡುವ ಎರಡು ತಿಂಗಳ ಹಳೆಯ ವೀಡಿಯೊ ಬುಧವಾರ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಸದ್ದು ಮಾಡಿತ್ತು. ಕಳೆದ ಮೇ 3 ರಂದು ಈಶಾನ್ಯ ರಾಜ್ಯದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದ ಒಂದು ದಿನದ ನಂತರ ಕಾಂಗ್ಪೋಕ್ಪಿ ಜಿಲ್ಲೆಯ ಹಳ್ಳಿಯೊಂದರಲ್ಲಿ ಈ ಘಟನೆ ನಡೆದಿತ್ತು. ವಿಡೀಯೋ ವೈರಲ್ ಆದ ಬಳಿಕ ರೊಚ್ಚಿಗೆದ್ದ ಜನ ಪ್ರತಿಭಟನೆಗೆ ಮುಂದಾಗಿದ್ದರು. ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದ ಮಣಿಪುರದ ತೌಬಲ್ ಜಿಲ್ಲೆಯ ನಾಂಗ್ಪೋಕ್ ಸೆಕ್ಮೈ ಪೊಲೀಸರು ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಕೇಸ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು. ಗುರುವಾರ ಸಂಜೆ ವೇಳೆಗೆ ನಾಲ್ವರನ್ನ ಬಂಧಿಸಲಾಗಿತ್ತು. ಆದರೂ ಪ್ರತಿಭಟನಾಕಾರರ ಆಕ್ರೋಶ ಮುಂದುವರಿದಿದ್ದು, ಶುಕ್ರವಾರವೂ ಹಿಂಸಾತ್ಮಕ ರೂಪ ತಾಳಿದೆ. ಆಕ್ರೋಶಗೊಂಡ ಪ್ರತಿಭಟನಾಕಾರರ ಗುಂಪು ಪ್ರಮುಖ ಆರೋಪಿ ಮನೆಗೆ ಬೆಂಕಿ ಹಚ್ಚಿ ಸುಟ್ಟುಹಾಕಿದೆ.

Join Whatsapp
Exit mobile version