ನವದೆಹಲಿ: ನಿನ್ನೆ ಬಂಧಿಸಲ್ಪಟ್ಟ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಮಾರ್ಚ್ 4 ರವರೆಗೆ ಸಿಬಿಐ ಕಸ್ಟಡಿಗೆ ಒಪ್ಪಿಸಲಾಗಿದೆ.
ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಅವರನ್ನು ನಿನ್ನೆ ಬಂಧಿಸಿದ್ದ ಸಿಬಿಐ ಅಧಿಕಾರಿಗಳು ಸೋಮವಾರ ಮಧ್ಯಾಹ್ನ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.
ಸಿಸೋಡಿಯಾ ಅವರನ್ನು ರೂಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ್ಯಾಯಾಲಯದ ಆವರಣದಲ್ಲಿ ಮತ್ತು ಹೊರಗೆ ಭಾರಿ ಭದ್ರತೆ ಕಲ್ಪಿಸಲಾಗಿತ್ತು.
ವಿಶೇಷ ಸಿಬಿಐ ನ್ಯಾಯಾಧೀಶ ಎಂ.ಕೆ.ನಾಗ್ಪಾಲ್ ಅವರು ಈ ಆದೇಶ ನೀಡಿದರು.
ಸಿಸೋಡಿಯಾ ಪರ ಹಿರಿಯ ವಕೀಲ ಮೋಹಿತ್ ಮಾಥುರ್ ಹಾಜರಾಗಿದ್ದರು.
ಮನೀಶ್ ಸಿಸೋಡಿಯಾ ಮಾರ್ಚ್ 4ರವರೆಗೆ ಸಿಬಿಐ ಕಸ್ಟಡಿಗೆ
Prasthutha|