ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ನಡೆದ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸಿಬಿಐ ಬಂಧಿಸಿದ ನಂತರ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ರಾಜ್ಯ ಸಚಿವ ಸಂಪುಟಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಸಿಸೋಡಿಯಾ ಅವರ ರಾಜೀನಾಮೆಯನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅಂಗೀಕರಿಸಿದ್ದಾರೆ.
ಇದೇ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿರುವ ಎಎಪಿ ಮುಖಂಡ ಸತ್ಯೇಂದರ್ ಜೈನ್ ಕೂಡ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದು, ಅದನ್ನು ಕೂಡ ಕೇಜ್ರಿವಾಲ್ ಅಂಗೀಕರಿಸಿದ್ದಾರೆ ಎಂದು ತಿಳಿದುಬಂದಿದೆ.
ಸಿಸೋಡಿಯಾ ಅವರನ್ನು ಸಿಬಿಐ ಭಾನುವಾರ ಬಂಧಿಸಿತ್ತು. ಇದನ್ನು ಪ್ರಶ್ನಿಸಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿತ್ತು. ಇದರ ಬೆನ್ನಲ್ಲೇ ಸಿಸೋಡಿಯಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.