ಬಂಧಿತ ಮನೀಶ್ ಸಿಸೋಡಿಯಾ ಬಿಜೆಪಿ ಸೇರಿದರೆ ಜೈಲಿನಿಂದ ಬಿಡುಗಡೆ: ಕೇಜ್ರಿವಾಲ್

Prasthutha|

ನವದೆಹಲಿ: ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಬಂಧನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು, ಸಿಸೋಡಿಯಾ ಇಂದು ಬಿಜೆಪಿಗೆ ಸೇರಿದರೆ ನಾಳೆಯೇ ಅವರು ಜೈಲಿನಿಂದ ಬಿಡುಗಡೆಯಾಗುತ್ತಾರೆ ಎಂದು ಹೇಳಿದ್ದಾರೆ.

- Advertisement -


ಮನೀಶ್ ಸಿಸೋಡಿಯಾ ಅವರನ್ನು ಬಂಧಿಸುವ ಮೂಲಕ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ತಮ್ಮ ಸರ್ಕಾರದ ಕೆಲಸವನ್ನು ಹಾಳು ಮಾಡಲು ಬಿಜೆಪಿ ಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ.
ಬಿಜೆಪಿಯು ಎಎಪಿಯ ಬೆಳವಣಿಗೆಯನ್ನು ತಡೆಯಲು ಬಯಸುತ್ತಿದೆ. ನಾವು ಪಂಜಾಬ್ ಗೆದ್ದಾಗಿನಿಂದ, ನಮ್ಮನ್ನು ಎದುರಿಸಲು ಅವರಿಗೆ ಸಾಧ್ಯವಾಗುತ್ತಿಲ್ಲ” ಎಂದು ಕೇಜ್ರಿವಾಲ್ ಹೇಳಿದ್ದಾರೆ.



Join Whatsapp