ಮತ್ತೆ ಸುಪ್ರೀಂ ಮೊರೆ ಹೋದ ಮನೀಶ್ ಸಿಸೋಡಿಯಾ

Prasthutha|

ನವದೆಹಲಿ: ದೆಹಲಿಯ ಮಾಜಿ ಉಪ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಮುಖಂಡ ಮನೀಶ್ ಸಿಸೋಡಿಯಾ ಮತ್ತೆ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಮರು ಪರಿಶೀಲನಾ ಅರ್ಜಿ ಸಲ್ಲಿಸಿದ್ದಾರೆ.

- Advertisement -

ಮದ್ಯ ಹಗರಣ ಪ್ರಕರಣದಲ್ಲಿ ಬಂಧನದಲ್ಲಿರುವ ಅವರಿಗೆ ಅಕ್ಟೋಬರ್ 30 ರಂದು ಸುಪ್ರೀಂ ಕೋರ್ಟ್ ಅವರಿಗೆ ಜಾಮೀನು ನಿರಾಕರಿಸಿತ್ತು. ಪ್ರಕರಣದಲ್ಲಿ 338 ಕೋಟಿ ರೂ.ಗಳ ವ್ಯವಹಾರವನ್ನು ಸಾಬೀತುಪಡಿಸಲು ತನಿಖಾ ಸಂಸ್ಥೆಗೆ ಸಾಧ್ಯವಾಗಿದೆ ಎಂದು ಹೇಳಿದ ನ್ಯಾಯಾಲಯ, ಈ ಸಮಯದಲ್ಲಿ ಅವರಿಗೆ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಹೇಳಿತ್ತು.

Join Whatsapp