Home ಟಾಪ್ ಸುದ್ದಿಗಳು ಮತ್ತೆ ಸುಪ್ರೀಂ ಮೊರೆ ಹೋದ ಮನೀಶ್ ಸಿಸೋಡಿಯಾ

ಮತ್ತೆ ಸುಪ್ರೀಂ ಮೊರೆ ಹೋದ ಮನೀಶ್ ಸಿಸೋಡಿಯಾ

ನವದೆಹಲಿ: ದೆಹಲಿಯ ಮಾಜಿ ಉಪ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಮುಖಂಡ ಮನೀಶ್ ಸಿಸೋಡಿಯಾ ಮತ್ತೆ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಮರು ಪರಿಶೀಲನಾ ಅರ್ಜಿ ಸಲ್ಲಿಸಿದ್ದಾರೆ.

ಮದ್ಯ ಹಗರಣ ಪ್ರಕರಣದಲ್ಲಿ ಬಂಧನದಲ್ಲಿರುವ ಅವರಿಗೆ ಅಕ್ಟೋಬರ್ 30 ರಂದು ಸುಪ್ರೀಂ ಕೋರ್ಟ್ ಅವರಿಗೆ ಜಾಮೀನು ನಿರಾಕರಿಸಿತ್ತು. ಪ್ರಕರಣದಲ್ಲಿ 338 ಕೋಟಿ ರೂ.ಗಳ ವ್ಯವಹಾರವನ್ನು ಸಾಬೀತುಪಡಿಸಲು ತನಿಖಾ ಸಂಸ್ಥೆಗೆ ಸಾಧ್ಯವಾಗಿದೆ ಎಂದು ಹೇಳಿದ ನ್ಯಾಯಾಲಯ, ಈ ಸಮಯದಲ್ಲಿ ಅವರಿಗೆ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಹೇಳಿತ್ತು.

Join Whatsapp
Exit mobile version