ಮನೀಶ್ ಸಿಸೋಡಿಯಾ ನ್ಯಾಯಾಂಗ ಬಂಧನ ವಿಸ್ತರಣೆ

Prasthutha|

ದೆಹಲಿಯ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಮೇ 31ರವರೆಗೆ ವಿಸ್ತರಿಸಲಾಗಿದೆ.

- Advertisement -


ಕೊರೊನಾ ಅವಧಿಯಲ್ಲಿ ದೆಹಲಿಯ ಆಮ್ ಆದ್ಮಿ ಪಕ್ಷದ ಸರ್ಕಾರವು ದೆಹಲಿ ಅಬಕಾರಿ ನೀತಿ 2021-22 ಅನ್ನು ಜಾರಿಗೊಳಿಸಿತ್ತು. ಲೆಫ್ಟಿನೆಂಟ್ ಗವರ್ನರ್ ಅವರು ಸಿಬಿಐ ತನಿಖೆಗೆ ಶಿಫಾರಸು ಮಾಡಿದ ನಂತರ ಈ ಮದ್ಯ ನೀತಿಯ ಅನುಷ್ಠಾನದಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಲಾಗಿದೆ.



Join Whatsapp