ಮನೀಶ್ ಸಿಸೋಡಿಯಾ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆ

Prasthutha|

ನವದೆಹಲಿ: ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಜುಲೈ 15ರವರೆಗೆ ವಿಸ್ತರಿಸಿ ದೆಹಲಿ ಕೋರ್ಟ್ ಇಂದು (ಶನಿವಾರ) ಆದೇಶ ಪ್ರಕಟಿಸಿದೆ.

- Advertisement -


ವಿಶೇಷ ನ್ಯಾಯಾಧೀಶೆ ಕಾವೇರಿ ಬಾವೇಜಾ ಅವರು ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಆದೇಶಿಸಿದರು.


ಅಬಕಾರಿ ನೀತಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮನೀಶ್ ಸಿಸೋಡಿಯಾ ಅವರನ್ನು ಕಳೆದ ವರ್ಷ ಮಾರ್ಚ್ 9ರಂದು ಜಾರಿ ನಿರ್ದೇಶನಾಲಯ ಬಂಧಿಸಿತ್ತು.



Join Whatsapp