ಮನೀಶ್ ಸಿಸೋಡಿಯಾ ನ್ಯಾಯಾಂಗ ಬಂಧನ ಮೇ 30ರವರೆಗೆ ವಿಸ್ತರಣೆ

Prasthutha|

ದೆಹಲಿ: ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಉಪಮುಖ್ಯಮಂತ್ರಿ ಹಾಗೂ ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ಮೇ 30 ರವರೆಗೆ ದೆಹಲಿ ಕೋರ್ಟ್ ವಿಸ್ತರಿಸಿದೆ.

- Advertisement -


ರೂಸ್ ಅವೆನ್ಯೂ ನ್ಯಾಯಾಲಯವು ಈ ಆದೇಶವನ್ನು ನೀಡಿದೆ. ಮನೀಶ್ ಸಿಸೋಡಿಯಾ ಅವರ ಮೇಲೆ ದೆಹಲಿ ಮದ್ಯದ ಅಬಕಾರಿ ನೀತಿ 2021-22ರ ವಿರುದ್ಧ ಕೇಂದ್ರೀಯ ತನಿಖಾ ದಳವು ಪ್ರಕರಣ ದಾಖಲಿಸಿಕೊಂಡಿತ್ತು. ಈ ಪ್ರಕರಣದಲ್ಲಿ ಪ್ರಮುಖ ಆರೋಪಿ ಎಂದು ಅವರನ್ನು ಬಂಧಿಸಲಾಗಿತ್ತು.



Join Whatsapp