ಮನೀಶ್ ಸಿಸೋಡಿಯಾ ನ್ಯಾಯಾಂಗ ಬಂಧನ ನವೆಂಬರ್ 22ರವರೆಗೆ ವಿಸ್ತರಣೆ

Prasthutha|

ದೆಹಲಿ: ಅಬಕಾರಿ ನೀತಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ನವೆಂಬರ್ 22ರವರೆಗೆ ವಿಸ್ತರಿಸಲಾಗಿದೆ.

- Advertisement -


ಸಿಸೋಡಿಯಾ ಅವರನ್ನು ಗುರುವಾರ ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಪ್ರಕರಣದ ಎಲ್ಲಾ ಆರೋಪಿಗಳ ವಿರುದ್ಧ ಸಲ್ಲಿಸಲಾದ ಆರೋಪಪಟ್ಟಿಯಲ್ಲಿನ ದಾಖಲೆಗಳನ್ನು ಈಗಾಗಲೇ ಸಲ್ಲಿಸಲಾಗಿದೆ ಎಂದು ಸಿಬಿಐ ನ್ಯಾಯಾಲಯಕ್ಕೆ ತಿಳಿಸಿದೆ.