Home ಕರಾವಳಿ ಮಂಜೇಶ್ವರ: ಒಂಬತ್ತು ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿವಾಹಿತ ಮಹಿಳೆ ಉತ್ತರಪ್ರದೇಶದಲ್ಲಿ ಪತ್ತೆ

ಮಂಜೇಶ್ವರ: ಒಂಬತ್ತು ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿವಾಹಿತ ಮಹಿಳೆ ಉತ್ತರಪ್ರದೇಶದಲ್ಲಿ ಪತ್ತೆ

ಮಂಜೇಶ್ವರ: ಒಂಬತ್ತು ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿವಾಹಿತ ಮಹಿಳೆ ಯುವಕನೊಂದಿಗೆ ಉತ್ತರ ಪ್ರದೇಶದ ಲಖ್ನೋದಲ್ಲಿ ಪತ್ತೆಯಾಗಿದ್ದಾರೆ.
ಡಿವೈಎಸ್ಪಿ ಪಿ.ಕೆ ಸುಧಾಕರನ್ ನೇತೃತ್ವದ ತನಿಖಾ ತಂಡ ನಡೆಸಿದ ಕಾರ್ಯಾಚರಣೆಯಲ್ಲಿ ಜೋಡಿಯನ್ನು ಉತ್ತರಪ್ರದೇಶದಲ್ಲಿ ಪತ್ತೆ ಹಚ್ಚಲಾಗಿದೆ. ಬಳಿಕ ಇಬ್ಬರನ್ನೂ ಕಾಸರಗೋಡಿಗೆ ಕರೆತರಲಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಪಾವೂರು ಮೂಲದ ಸದ್ಯ ಮಂಜೇಶ್ವರದ ಫ್ಲಾಟ್ನಲ್ಲಿ ವಾಸಿಸುತ್ತಿರುವ ಕುಂಞಿಬಿ ಅಲಿಯಾಸ್ ಝಾಹಿದಾ (33) ಉತ್ತರ ಪ್ರದೇಶದ ಯುವಕನೊಂದಿಗೆ ಪತ್ತೆಯಾದ ಮಹಿಳೆಯಾಗಿದ್ದಾರೆ.
ಝಾಹಿದಾ ಒಂಬತ್ತು ತಿಂಗಳ ಹಿಂದೆ ತನ್ನ 12 ವರ್ಷದ ಮಗನನ್ನು ಶಾಲೆಗೆ ಬಿಟ್ಟು ಬಂದಿದ್ದರು. ನಂತರ ಮಂಗಳೂರಿನ ಆಯುರ್ವೇದ ಆಸ್ಪತ್ರೆಗೆ ಹೋಗಿ ಬರುವುದಾಗಿ ತಿಳಿಸಿ ಹೊರಗಡೆ ಹೋಗಿದ್ದು, ಮತ್ತೆ ತಿರುಗಿ ಬರಲೇ ಇಲ್ಲ.

ಸಂಬಂಧಿಕರ ದೂರಿನ ಮೇರೆಗೆ ಪೊಲೀಸರು ಸೈಬರ್ ಸೆಲ್ ಸಹಾಯದಿಂದ ನಡೆಸಿದ ತನಿಖೆಯಲ್ಲಿ ಝಾಹಿದಾ ಅವರ ಮೊಬೈಲ್ ಫೋನ್ಗೆ ಬಂದಿದ್ದ ಸುಮಾರು 3300 ಕರೆಗಳನ್ನು ಪತ್ತೆ ಹಚ್ಚಿದ್ದರು.
ಜೋಡಿ ಮುಂಬೈನಲ್ಲಿದೆ ಎಂಬ ಮಾಹಿತಿ ಮೇರೆಗೆ ಮಂಜೇಶ್ವರಂ ಪೊಲೀಸರು ಮುಂಬೈನಲ್ಲಿ ಒಂದು ವಾರ ಹುಡುಕಾಡಿದರೂ ಪ್ರಯೋಜನವಾಗಲಿಲ್ಲ. ಪೊಲೀಸರು ಮುಂಬೈಗೆ ಆಗಮಿಸಿರುವ ಮಾಹಿತಿ ಪಡೆದು ಜೋಡಿ ಲಖನೌ ಪ್ರವೇಶಿಸಿದ್ದರು.
ಪೊಲೀಸ್ ತನಿಖೆಯಲ್ಲಿ ವಿಳಂಬ ಮಾಡುತ್ತಿದೆ ಎಂದು ಕುಟುಂಬಿಕರು ಮುಖ್ಯಮಂತ್ರಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳಿಗೆ ದೂರು ಸಲ್ಲಿಸಿದ್ದರು.
ಇದರೊಂದಿಗೆ ತನಿಖೆಯನ್ನು ತೀವ್ರಗೊಳಿಸುವಂತೆ ಗೃಹ ಇಲಾಖೆ ಪೊಲೀಸರಿಗೆ ಸೂಚನೆ ಬಂದಿತ್ತು. ನಂತರ ಡಿವೈಎಸ್ಪಿ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಿ ಹುಡುಕಾಟ ನಡೆಸಲಾಗಿತ್ತು.
ಇಂದು ಜೋಡಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Join Whatsapp
Exit mobile version