ಮಂಗಳೂರು: ಹಿರಿಯ ಪತ್ರಕರ್ತ, ನಿರೂಪಕ ಮನೋಹರ ಪ್ರಸಾದ್ ನಿಧನ

Prasthutha|

- Advertisement -

ಮಂಗಳೂರು: ಖ್ಯಾತ ಪತ್ರಕರ್ತ, ಕಾರ್ಯಕ್ರಮ ನಿರೂಪಕ ಮನೋಹರ ಪ್ರಸಾದ್(64) ಮಾ.1ರ ಶುಕ್ರವಾರ ಮುಂಜಾನೆ ನಿಧನರಾಗಿದ್ದಾರೆ.

ಮೂಲತಃ ಕಾರ್ಕಳ ತಾ| ಕರುವಾಲು ಗ್ರಾಮದವರಾದ ಮನೋಹರ ಪ್ರಸಾದ್ ಮಂಗಳೂರಿನಲ್ಲಿ ಕಾಲೇಜು ಪದವಿ ಶಿಕ್ಷಣ ಪೂರ್ತಿಗೊಳಿಸಿ “ನವ ಭಾರತ’ ಪತ್ರಿಕೆಯಲ್ಲಿ ಪತ್ರಿಕಾ ವೃತ್ತಿ ಜೀವನ ಆರಂಭಿಸಿದ್ದರು. ಬಳಿಕ “ಉದಯವಾಣಿ’ಯಲ್ಲಿ 36 ವರ್ಷಗಳ ಸೇವೆ ಸಲ್ಲಿಸಿ ಕಳೆದ ಎರಡು ವರ್ಷದ ಹಿಂದೆ ನಿವೃತ್ತಿಗೊಂಡಿದ್ದರು.

- Advertisement -

ಮುದ್ರಣ ಮಾಧ್ಯಮಕ್ಕೆ ನೀಡಿರುವ ಅಪಾರ ಸೇವೆಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗಿದೆ.

Join Whatsapp