ಮುಂಬೈ: ವ್ಯಕ್ತಿಯೊಬ್ಬ ತನ್ನ ಲಿವ್-ಇನ್ ಸಂಗಾತಿಯನ್ನು ಹತ್ಯೆಗೈದು, ದೇಹದ ಭಾಗವನ್ನು ತುಂಡು ಮಾಡಿ ಅದನ್ನು ಕುಕ್ಕರ್ ನಲ್ಲಿ ಬೇಯಿಸಿರುವ ಪ್ರಕರಣ ಮಹಾರಾಷ್ಟ್ರದ ಥಾಣೆಯಲ್ಲಿ ಬಯಲಾಗಿದೆ.
ಮೃತ ಮಹಿಳೆಯನ್ನು ಸರಸ್ವತಿ ವೈದ್ಯ(32) ಎಂದು ಗುರುತಿಸಲಾಗಿದ್ದು, ಆರೋಪಿಯನ್ನು 56 ವರ್ಷದ ಮನೋಜ್ ಸಹಾನಿ ಎಂದು ಗುರುತಿಸಲಾಗಿದೆ.
3–4 ದಿನಗಳ ಹಿಂದೆ ಸರಸ್ವತಿಯನ್ನು ಕೊಂದಿದ್ದ ಮನೋಜ್, ಟ್ರೀ ಕಟ್ಟರ್ ಅನ್ನು ಖರೀದಿಸಿ ಆಕೆಯ ದೇಹವನ್ನು 12–13 ತುಂಡು ಮಾಡಿದ್ದ. ಬಳಿಕ, ಪ್ರೆಶರ್ ಕುಕ್ಕರ್ ನಲ್ಲಿ ಬೇಯಿಸಿ, ಹೊರಗೆ ಎಸೆಯುವ ಉದ್ದೇಶದಿಂದ ಪ್ಲಾಸ್ಟಿಕ್ ಪೇಪರ್ ನಲ್ಲಿ ಸುತ್ತಿ ಇಟ್ಟಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಸಾಕ್ಷ್ಯವನ್ನು ಮರೆಮಾಡಲು ಪ್ರಯತ್ನಿಸುವ ಸಲುವಾಗಿ ಈ ರೀತಿ ದೇಹದ ಭಾಗವನ್ನು ಕುಕ್ಕರ್ ನಲ್ಲಿ ಬೇಯಿಸಿರಬಹುದು ಎಂದು ಪೊಲೀಸ್ ಉಪ ಆಯುಕ್ತ ಜಯಂತ್ ಬಜ್ಬಲೆ ಅವರು ಹೇಳಿದ್ದಾರೆ. ಸರಸ್ವತಿ ವೈದ್ಯ ಮತ್ತು ಮನೋಜ್ ಸಹಾನಿ 3 ವರ್ಷಗಳಿಂದ ಈ ಜೋಡಿ ಫ್ಲ್ಯಾಟ್ ನಲ್ಲಿ ವಾಸವಿತ್ತು ಎಂದು ತಿಳಿದು ಬಂದಿದೆ.
#WATCH | Maharashtra | 32-year-old woman killed by 56-year-old live-in partner | As per Police, the accused Manoj Sahni killed Saraswati Vaidya 3-4 days back and after that, he purchased a tree-cutter to chop her into pieces. Police say that the accused boiled pieces of her body… pic.twitter.com/ilFUfWVOLY
— ANI (@ANI) June 8, 2023