Home ಟಾಪ್ ಸುದ್ದಿಗಳು ಸುಟ್ಟು ಕರಕಲಾದ ಕಾರಿನಲ್ಲಿ ವ್ಯಕ್ತಿಯ ಶವ ಪತ್ತೆ

ಸುಟ್ಟು ಕರಕಲಾದ ಕಾರಿನಲ್ಲಿ ವ್ಯಕ್ತಿಯ ಶವ ಪತ್ತೆ

ಬೆಂಗಳೂರು: ಕೊಡಿಗೇಹಳ್ಳಿ ಠಾಣಾ ವ್ಯಾಪ್ತಿಯ ಭದ್ರಪ್ಪ ಲೇಔಟ್ ಬಳಿ ಸುಟ್ಟು ಕರಕಲಾದ ಕಾರಿನಲ್ಲಿ ಅನುಮಾನಾಸ್ಪದವಾಗಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ.


ಭದ್ರಪ್ಪ ಲೇಔಟ್ ನಲ್ಲಿ ಇಂದು ಬೆಳಿಗ್ಗೆ ಸುಟ್ಟು ಕರಕಲಾಗಿರುವ ಕಾರೊಂದನ್ನು ಸ್ಥಳೀಯರು ಗಮನಿಸಿದ್ದಾರೆ. ಹತ್ತಿರ ಹೋಗಿ ನೋಡಿದಾಗ, ಕಾರಿನಲ್ಲಿ ವ್ಯಕ್ತಿಯ ಶವ ಇರುವುದು ಕಂಡುಬಂದಿದೆ.


ಕೂಡಲೇ ಸ್ಥಳೀಯರು ಪೊಲೀಸರಿಗೆ ವಿಷಯ ತಿಳಿಸಿದ್ದು, ತಕ್ಷಣವೇ ಸ್ಥಳಕ್ಕೆ ಬಂದು ಪರಿಶೀಲನೆ ಮಾಡಿದಾಗ ಕಾರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಈ ಸಂಬಂಧ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಳ್ಳಲಾಗಿದೆ.

Join Whatsapp
Exit mobile version