ಬಿ.ಸಿ.ರೋಡ್ ಮುಖ್ಯ ವೃತ್ತದ ಬಳಿ ವ್ಯಕ್ತಿಯ ಮೃತದೇಹ ಪತ್ತೆ

Prasthutha|

ಬಂಟ್ವಾಳ: ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾದ ಘಟನೆ ಬಿಸಿರೋಡಿನ ಮುಖ್ಯ ವೃತ್ತದ ಬಳಿ ನಡೆದಿದೆ.


ಸುಮಾರು 55 ಪ್ರಾಯದ ಅಪರಿಚಿತ ವ್ಯಕ್ತಿ ಮಲಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಫೆ.2 ರಂದು ಗುರುವಾರ ಅಪರಿಚಿತ ವ್ಯಕ್ತಿ ಅಮಲು ಪದಾರ್ಥ ಸೇವಿಸಿ ಮಲಗಿದ್ದ ಎಂದು ಹೇಳಲಾಗಿದೆ.
ಇಂದು ಬೆಳಿಗ್ಗೆ ಸಾರ್ವಜನಿಕರು ಮೃತದೇಹವನ್ನು ನೋಡಿ ಪೋಲೀಸರಿಗೆ ಮಾಹಿತಿ ನೀಡಿದ್ದಾರೆ.

- Advertisement -


ಸ್ಥಳಕ್ಕೆ ಬಂಟ್ವಾಳ ನಗರ ಠಾಣೆಯ ಪೊಲೀಸರು ಭೇಟಿ ನೀಡಿದ್ದಾರೆ.

- Advertisement -