ರಾಜ್ಯಸಭೆ ಚುನಾವಣೆ: ಕಾಂಗ್ರೆಸ್ ನಿಂದ ಎರಡನೇ ಅಭ್ಯರ್ಥಿಯಾಗಿ ಮನ್ಸೂರ್ ಅಲಿ ಖಾನ್ ನಾಮಪತ್ರ ಸಲ್ಲಿಕೆ

Prasthutha|

ಬೆಂಗಳೂರು: ಕಾಂಗ್ರೆಸ್ ರಾಜ್ಯಸಭಾ ಮೊದಲನೇ ಅಭ್ಯರ್ಥಿಯಾಗಿ ಜೈರಾಮ್ ರಮೇಶ್ ಹಾಗೂ ಎರಡನೇ ಅಭ್ಯರ್ಥಿಯಾಗಿ ಮನ್ಸೂರ್ ಅಲಿಖಾನ್ ನಾಮಪತ್ರ ಸಲ್ಲಿಸಿದ್ದಾರೆ.
ಚುನಾವಣಾಧಿಕಾರಿಯಾಗಿರುವ ಎಂ.ಕೆ.ವಿಶಾಲಾಕ್ಷಿಗೆ ನಾಮಪತ್ರ ಸಲ್ಲಿಕೆ ಮಾಡಿದರು. ಈ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ,ಯು.ಟಿ.ಖಾದರ್, ಜಮೀರ್ ಅಹಮದ್ ಖಾನ್ ಉಪಸ್ಥಿತರಿದ್ದರು.
ಬಿಜೆಪಿಯಿಂದ ಕೇಂದ್ರ ಆರ್ಥಿಕ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಚಿತ್ರನಟ ಜಗ್ಗೇಶ್ ಅವರಿಗೆ ಟಿಕೆಟ್ ನೀಡಲಾಗಿದೆ. ಜೆಡಿಎಸ್ ಇನ್ನೂ ಅಭ್ಯರ್ಥಿ ಘೋಷಿಸಿಲ್ಲ. ರಾಜ್ಯಸಭೆ ಮಾಜಿ ಸದಸ್ಯ ಕುಪೇಂದ್ರ ರೆಡ್ಡಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಸಿದ್ಧತೆ ನಡೆಸಿದ್ದಾರೆ.



Join Whatsapp